ರಾಜ್ಯ

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ ಗ್ರಾಮ ಪಂಚಾಯತಿಯ ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿಯೇ ಪಡೆಯಬಹುದು.

ಹೋಬಳಿ ಕೇಂದ್ರಗಳಿಗೆ ಅಲೆಯುವ ಬವಣೆ ತಪ್ಪಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಈ ಪ್ರಮಾಣ ಪತ್ರವನ್ನು ಸಂಪೂರ್ಣ ಉಚಿತವಾಗಿ ನೀಡಲಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ದೇಶನದ ಮೇರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿಗಳು ಈ ಆದೇಶವನ್ನು ಹೊರಡಿಸಿದ್ದಾರೆ. ಇದರಿಂದ ಗ್ರಾಮೀಣ ಜನರ ಸಮಯ ಮತ್ತು ಹಣ ಉಳಿತಾಯವಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟವಾಗಲಿದೆ.

ಪಿಡಿಓಗಳಿಗೆ ಅಧಿಕಾರ:

ಸದ್ಯ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿರುವ ’ಬಾಪೂಜಿ ಸೇವಾ ಕೇಂದ್ರ’ಗಳ ಮೂಲಕ ಸರ್ಕಾರದ ೮೫ಕ್ಕೂ ಹೆಚ್ಚು ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಇದೇ ಕೇಂದ್ರಗಳ ಮೂಲಕ ವಾಸಸ್ಥಳ ದೃಢೀಕರಣ ಪತ್ರವನ್ನು ನೀಡುವ ಅಧಿಕಾರವನ್ನು ಆಯಾ ಗ್ರಾಮ ಪಂಚಾಯತಿಯ ‘ಪಂಚಾಯತಿ ಅಭಿವೃದ್ಧಿ ಅಧಿಕಾರಿ’ಗೆ (ಪಿಡಿಒ) ನೀಡಲಾಗಿದೆ. ಇದರಿಂದ ಗ್ರಾಮೀಣ ಜನರು ಸ್ಥಳೀಯವಾಗಿ ಹಾಗೂ ವಿಳಂಬವಿಲ್ಲದೆ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗಲಿದೆ.

ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿ:

ವಾಸಸ್ಥಳ ದೃಢೀಕರಣ ಪತ್ರವನ್ನು ನೀಡಲು ಸಾರ್ವಜನಿಕರು ಒದಗಿಸಬೇಕಾದ ಅಗತ್ಯ ದಾಖಲೆಗಳು ಯಾವುವು ಮತ್ತು ಇದರ ಸಂಪೂರ್ಣ ಕಾರ್ಯವಿಧಾನ ಹೇಗಿರಲಿದೆ ಎಂಬುದರ ಕುರಿತು ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಹಿಂದಿನ ಸಮಸ್ಯೆಯೇನಿತ್ತು?
ಈವರೆಗೆ ಗ್ರಾಮೀಣ ಭಾಗದ ನಾಗರಿಕರು ಶಾಲಾ-ಕಾಲೇಜು ಪ್ರವೇಶ, ಉದ್ಯೋಗ, ಸರ್ಕಾರಿ ಸೌಲಭ್ಯಗಳು ಸೇರಿದಂತೆ ಹಲವು ಉದ್ದೇಶಗಳಿಗಾಗಿ ವಾಸಸ್ಥಳ ಪ್ರಮಾಣ ಪತ್ರವನ್ನು ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಪಡೆಯಬೇಕಾಗಿತ್ತು. ಇದಕ್ಕಾಗಿ ಗ್ರಾಮಸ್ಥರು ಹೋಬಳಿ ಕೇಂದ್ರಗಳಿಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ತುರ್ತು ಸಂದರ್ಭಗಳಲ್ಲಿ ಪ್ರಮಾಣ ಪತ್ರ ಪಡೆಯಲು ಸಾಕಷ್ಟು ವಿಳಂಬವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು.

ಆದೇಶದ ಪ್ರಮುಖ ಅಂಶಗಳು
* ಪಿಡಿಓಗಳು ತಮ್ಮ ವ್ಯಾಪ್ತಿಯ ಅರ್ಹ ನಿವಾಸಿಗಳಿಗೆ ಒಂದು ಬಾರಿಗೆ ಅಭಿಯಾನದ ಮಾದರಿಯಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸಿ ಪತ್ರ ನೀಡಬೇಕು
* ವಾಸಸ್ಥಳ ದೃಢೀಕರಣ ಪತ್ರವನ್ನು  ’ಅಟಲ್ ಜೀ ಜನಸ್ನೇಹಿ ಕೇಂದ್ರ’ದ ತಂತ್ರಾಂಶದಲ್ಲಿ ಲಭ್ಯವಿರುವ ಸೇವೆಯನ್ನೇ ಬಳಸಿಕೊಳ್ಳಬೇಕು
* ವಾಸಸ್ಥಳ ಪ್ರಮಾಣ ಪತ್ರವನ್ನು ನೀಡಲು ಸಾರ್ವಜನಿಕರಿಂದ ‘ಯಾವುದೇ ಸೇವಾ ಶುಲ್ಕವನ್ನು ವಿಧಿಸುವಂತಿಲ್ಲ’. ಸಂಪೂರ್ಣ ಉಚಿತವಾಗಿ ನೀಡಬೇಕು

 

ಆಂದೋಲನ ಡೆಸ್ಕ್

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

1 hour ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

1 hour ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

1 hour ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

1 hour ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

1 hour ago