Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಜೀನಾಮೆ ನೀಡಿದ ಬಳಿಕ ಮರೀಗೌಡ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದು, ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಅವರ ಜೊತೆ ಬಹಳ ವರ್ಷದಿಂದ ಇದ್ದೇನೆ. ನನಗೆ ಸಿದ್ದರಾಮಯ್ಯ ಅಕ್ರಮ ಮಾಡಿ ಎಂದು ಹೇಳಿಲ್ಲ. ನನ್ನ ಹಾಗೂ ಸಿದ್ದರಾಮಯ್ಯರ ನಡುವೆ ಉತ್ತಮ ಬಾಂಧವ್ಯ ಇದೆ. ನನಗೆ ಎರಡು ಬಾರಿ ಸ್ಟ್ರೋಕ್‌ ಆಗಿದೆ. ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಸಾಧ್ಯವಿಲ್ಲ. ಹಾಗಾಗಿ ನಾನು ಇಂದು ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸ್ಷಷ್ಟಪಡಿಸಿದ್ದಾರೆ.

Tags: