ರಾಜ್ಯ

ಕನ್ನಡಿಗ ರಾಹುಲ್ ದ್ರಾವಿಡ್ ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ

ಬೆಂಗಳೂರು : ಇಂದು ಅಧಿವೇಶನದಲ್ಲಿ ಟಿ೨೦ ವಿಶ್ವಕಪ್‌ ೨೦೨೪ ರ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್‌ ರಾಹುಲ್‌ ದ್ರಾವಿಡ್‌ ಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.

ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ , ಭಾರತ ಟಿ.೨೦ ವಿಶ್ವಕಪ್‌ ಗೆಲುವಿನ ವೇಳೆ ಟೀಂ ಇಂಡಿಯಾದ ಮುಖ್ಯಕೋಚ್‌ ಆಗಿದ್ದ ಕನ್ನಡಿಗ ರಾಹುಲ್‌ ದ್ರಾವಿಡ್‌ ಅವರಿಗೆ ಸನ್ಮಾನಿಸಬೇಕು ಎಂದು ಮನವಿ ಮಾಡಿದರು. ಬಳಿಕ ಸದನದ ಎಲ್ಲಾ ಸದಸ್ಯರು ಈ ಮನವಿಯನ್ನ ಸ್ವಾಗತಿಸಿದರು. ಬಳಿಕ ಈ ವಿಚಾರವಾಗಿ ಸ್ಪೀಕರ್‌ ಯು.ಟಿ ಖಾದರ್‌ ಪ್ರತಿಕ್ರಿಯಿಸಿ, ಕರ್ನಾಟಕದ ಜನತೆಯ ಪರವಾಗಿ ದ್ರಾವಿಡ್‌ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

39 mins ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮಂಡ್ಯ: ಇಂದಿನಿಂದ ( ಡಿಸೆಂಬರ್‌ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…

2 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

10 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

11 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

11 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

11 hours ago