Mysore
22
haze

Social Media

ಸೋಮವಾರ, 15 ಡಿಸೆಂಬರ್ 2025
Light
Dark

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಕಗ್ಗೊಲೆ: ಪತ್ನಿಯಿಂದಲೇ ಕೊಲೆ ಶಂಕೆ

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಕೊಲೆಯಾಗಿದ್ದು, ಪತ್ನಿಯಿಂದಲೇ ಕೃತ್ಯ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ಓಂ ಪ್ರಕಾಶ್‌ ಅವರ ಪತ್ನಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮನೆಯಲ್ಲಿ ರಕ್ತ-ಸಿಕ್ತ ಕಲೆಗಳನ್ನು ಕಂಡು ಪೊಲೀಸರೇ ಫುಲ್‌ ಶಾಕ್‌ ಆಗಿದ್ದಾರೆ.

ಹಲವು ದಿನಗಳಿಂದ ಓಂ ಪ್ರಕಾಶ್‌ ಅವರ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಅವರಿಗೆ ನಿರಂತರವಾಗಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಇದ್ದಕ್ಕಿದ್ದಂತೆ ಓಂ ಪ್ರಕಾಶ್‌ ಅವರಿಗೆ ಚಾಕುವಿನಿಂದ ಚುಚ್ಚಿ-ಚುಚ್ಚಿ ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Tags:
error: Content is protected !!