Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು : ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೂ ಸರ್ಕಾರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ನಿವೃತ್ತಿಯಾದ ನೌಕರರಿಗೆ ಶುಭ ಸುದ್ದಿ ಕೊಟ್ಟಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.

ಇನ್ನು ಆದೇಶದಲ್ಲಿ 2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿಗಳು ಮತ್ತು ನೌಕರರಿಗೆ 2019ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲ ವೇತನವನ್ನು ಪರಿಗಣಿಸಿ ಶೇ.15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಉಲ್ಲೇಖಿಸಲಾಗಿದೆ. ಇನ್ನು ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂಪಾಯಿ ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ.

ಅಲ್ಲದೆ 2023 ರ ಮಾರ್ಚ್ 01 ರಂದು ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಜೊತೆಗೆ ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಸರ್ಕಾರ ಆದೇಶಿಸಿದೆ

 

Tags:
error: Content is protected !!