ಬೆಂಗಳೂರು : ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೂ ಸರ್ಕಾರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ನಿವೃತ್ತಿಯಾದ ನೌಕರರಿಗೆ ಶುಭ ಸುದ್ದಿ ಕೊಟ್ಟಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, 2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.
ಇನ್ನು ಆದೇಶದಲ್ಲಿ 2023 ರ ಮಾರ್ಚ್ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿಗಳು ಮತ್ತು ನೌಕರರಿಗೆ 2019ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲ ವೇತನವನ್ನು ಪರಿಗಣಿಸಿ ಶೇ.15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಉಲ್ಲೇಖಿಸಲಾಗಿದೆ. ಇನ್ನು ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂಪಾಯಿ ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ.
ಅಲ್ಲದೆ 2023 ರ ಮಾರ್ಚ್ 01 ರಂದು ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಜೊತೆಗೆ ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಸರ್ಕಾರ ಆದೇಶಿಸಿದೆ
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…