ಬೆಂಗಳೂರು: ನಿವೃತ್ತ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಸಿಬಿ, ಕೋರ್‌ಟಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಚಾರ್ಜ್‌ಶೀಟ್‌ನಲ್ಲಿ ಓಂಪ್ರಕಾಶ್ ಮಗಳ ಹೆಸರನ್ನು ಕೈಬಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಓಂ ಪ್ರಕಾಶ್ ಕೊಲೆಯಾದ ಬಳಿಕ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಓಂಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳ ವಿರುದ್ಧ ದೂರು ದಾಖಲಿಸಲಾಗಿತ್ತು. ಎಫ್‌ಐಆರ್‌ನಲ್ಲಿ ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನು ಎ1, ಮಗಳನ್ನು ಎ2 ಆರೋಪಿಯನ್ನಾಗಿ ಮಾಡಲಾಗಿತ್ತು.
ತನಿಖೆಯ ವೇಳೆ ಓಂಪ್ರಕಾಶ್ ಹತ್ಯೆಯಲ್ಲಿ ಮಗಳ ಪಾತ್ರ ಇಲ್ಲ ಎಂದು ಕಂಡು ಬಂದಿದೆ. ಹೀಗಾಗಿ ತಂದೆಯ ಮರ್ಡರ್ ಕೇಸ್‌ನಲ್ಲಿ ಎ2 ಆರೋಪಿಯಾಗಿದ್ದ ಮಗಳನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗಿದೆ.
ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದ್ದು, ಕೊಲೆಗೆ ಪ್ರಮುಖವಾದ ಕಾರಣ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಯ ವಿಚಾರ ಎಂದು ಉಲ್ಲೇಖ ಮಾಡಲಾಗಿದೆ.





