ರಾಜ್ಯ

ನಿವೃತ್ತ ಐಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣ: ಕೋರ್ಟ್‌ಗೆ ಚಾರ್ಜ್‌ ಶೀಟ್‌ ಸಲ್ಲಿಕೆ

ಬೆಂಗಳೂರು: ನಿವೃತ್ತ ಐಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಸಿಬಿ, ಕೋರ್‌ಟಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ಚಾರ್ಜ್‌ಶೀಟ್‌ನಲ್ಲಿ ಓಂಪ್ರಕಾಶ್‌ ಮಗಳ ಹೆಸರನ್ನು ಕೈಬಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಓಂ ಪ್ರಕಾಶ್‌ ಕೊಲೆಯಾದ ಬಳಿಕ ಎಚ್‌ಎಸ್‌ಆರ್‌ ಲೇಔಟ್ ಪೊಲೀಸ್‌ ಠಾಣೆಯಲ್ಲಿ ಓಂಪ್ರಕಾಶ್‌ ಪತ್ನಿ ಪಲ್ಲವಿ ಹಾಗೂ ಮಗಳ ವಿರುದ್ಧ ದೂರು ದಾಖಲಿಸಲಾಗಿತ್ತು. ಎಫ್‌ಐಆರ್‌ನಲ್ಲಿ ಓಂ ಪ್ರಕಾಶ್‌ ಪತ್ನಿ ಪಲ್ಲವಿಯನ್ನು ಎ1, ಮಗಳನ್ನು ಎ2 ಆರೋಪಿಯನ್ನಾಗಿ ಮಾಡಲಾಗಿತ್ತು.

ತನಿಖೆಯ ವೇಳೆ ಓಂಪ್ರಕಾಶ್‌ ಹತ್ಯೆಯಲ್ಲಿ ಮಗಳ ಪಾತ್ರ ಇಲ್ಲ ಎಂದು ಕಂಡು ಬಂದಿದೆ. ಹೀಗಾಗಿ ತಂದೆಯ ಮರ್ಡರ್‌ ಕೇಸ್‌ನಲ್ಲಿ ಎ2 ಆರೋಪಿಯಾಗಿದ್ದ ಮಗಳನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗಿದೆ.

ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದ್ದು, ಕೊಲೆಗೆ ಪ್ರಮುಖವಾದ ಕಾರಣ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಯ ವಿಚಾರ ಎಂದು ಉಲ್ಲೇಖ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

2 mins ago

ಕೊಡಗಿನಲ್ಲಿ ಅಂದಾಜು ೨,೨೭೯ ಹೆಕ್ಟೇರ್ ಬೆಳೆ ಹಾನಿ

ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ…

10 mins ago

ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟ ಶುರು

ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ…

15 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ; ಲೋಕಾಯುಕ್ತರಿಂದ ತನಿಖೆ?

ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ…

19 mins ago

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

17 hours ago