Mysore
25
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಮೂಲಕ ರೇವಣ್ಣ ಅವರಿಗೆ ತಾತ್ಕಲಿಕ ರಿಲೀಫ್‌ ಸಿಕ್ಕಂತಾಗಿದೆ.

ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದ್ದು, ಇದು ನಾಳೆ(ಮೇ.೧೭) ಮಧ್ಯಾಹ್ನ ೩ ಗಂಟೆಯವರೆಗೆ ಮಾತ್ರ. ಇದಾದ ಬಳಿಕ ರೇವಣ್ಣ ಮತ್ತೆ ವಿಚಾರಣೆಗೆ ಒಳಗಾಗಬೇಕಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಪ್ರಕರಣ ಜಾಮೀನು ಸಹಿತ ಪ್ರಕರಣ ಆದ ಹಿನ್ನೆಲೆ ಜಾಮೀನು ಪಡೆಯಲು ರೇವಣ್ಣ ಅರ್ಜಿ ಸಲ್ಲಿಸಿದರು. ಅದರಂತೆ ವಾದ-ವಿವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. ೫ ಲಕ್ಷ ಬಾಂಡ್‌, ಒಬ್ಬ ಶ್ಯೂರಿಟ್‌ ನೀಡುವಂತೆ ಕೋರ್ಟ್‌ ಸೂಚಿಸಿದೆ. ನಾಳೆ ಮಧ್ಯಾಹ್ನ ೩ ಗಂಟೆಗೆ ರೇವಣ್ಣ ಮತ್ತೆ ಕೋರ್ಟ್‌ಗೆ ಹಾಜರಾಗಬೇಕಿದ್ದು, ವಿಚಾರಣೆ ಮುಂದುವರೆಯಲಿದೆ.

Tags:
error: Content is protected !!