ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಮೂಲಕ ರೇವಣ್ಣ ಅವರಿಗೆ ತಾತ್ಕಲಿಕ ರಿಲೀಫ್ ಸಿಕ್ಕಂತಾಗಿದೆ.
ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದ್ದು, ಇದು ನಾಳೆ(ಮೇ.೧೭) ಮಧ್ಯಾಹ್ನ ೩ ಗಂಟೆಯವರೆಗೆ ಮಾತ್ರ. ಇದಾದ ಬಳಿಕ ರೇವಣ್ಣ ಮತ್ತೆ ವಿಚಾರಣೆಗೆ ಒಳಗಾಗಬೇಕಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಪ್ರಕರಣ ಜಾಮೀನು ಸಹಿತ ಪ್ರಕರಣ ಆದ ಹಿನ್ನೆಲೆ ಜಾಮೀನು ಪಡೆಯಲು ರೇವಣ್ಣ ಅರ್ಜಿ ಸಲ್ಲಿಸಿದರು. ಅದರಂತೆ ವಾದ-ವಿವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. ೫ ಲಕ್ಷ ಬಾಂಡ್, ಒಬ್ಬ ಶ್ಯೂರಿಟ್ ನೀಡುವಂತೆ ಕೋರ್ಟ್ ಸೂಚಿಸಿದೆ. ನಾಳೆ ಮಧ್ಯಾಹ್ನ ೩ ಗಂಟೆಗೆ ರೇವಣ್ಣ ಮತ್ತೆ ಕೋರ್ಟ್‌ಗೆ ಹಾಜರಾಗಬೇಕಿದ್ದು, ವಿಚಾರಣೆ ಮುಂದುವರೆಯಲಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…