ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಏ.25 ರಿಂದ ಮೇ.8ರವರೆಗೆ ಈ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಫೆ.28 ರಿಂದ ಮಾ.17ರವರೆಗೆ ಸುಸೂತ್ರವಾಗಿ ನಡೆದಿತ್ತು. ಇದರ ಬೆನ್ನಲ್ಲೇ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಏ.25 ರಂದು ಕನ್ನಡ, ಅರೇಬಿಕ್‌, ಏ.27 ರಂದು ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ರಸಾಯನಶಾಸ್ತ್ರ, ಲೆಕ್ಕಶಾಸ್ತ್ರ, ಏ.28 ರಂದು ಇಂಗ್ಲಿಷ್‌ ಹಾಗೂ ಏ.29 ರಂದು ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಏ.30 ರಂದು ಅರ್ಥಶಾಸ್ತ್ರ, ಜೀವಶಾಸ್ತ್ರ, ಮೇ. 2ರಂದು ಇತಿಹಾಸ, ಗಣಿತ, ಗೃಹವಿಜ್ಞಾನ, ಮೇ.4 ರಂದು ರಾಜ್ಯಶಾಸ್ತ್ರ, ವಿದ್ಯುನಾನ ಶಾಸ್ತ್ರ, ಗಣಕವಿಜ್ಞಾನ ಹಾಗೂ ಮೇ.5 ರಂದು ಹಿಂದಿ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಮೇ.6 ರಂದು ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ.7 ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ, ಮೂಲಗಣಿತ, ಮೇ.8 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷೆಗಳ ಪರೀಕ್ಷೆಗಳು ನಡೆಯಲಿವೆ.
ಅಲ್ಲದೆ, ಅದೇ ದಿನ ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್‌ ವೆಲ್‌ನೆಸ್‌‍ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago