ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಉತ್ತರಿಸಿದ್ದಾರೆ.
ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯ ಎ.ಆರ್.ಕೃಷ್ಣಮೂರ್ತಿ ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದರು.
ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬಸ್ತೀಪುರದ ಸರ್ವೇ ನಂ. 15ರಲ್ಲಿನ 3.56 ಎಕರೆ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಅಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಉತ್ತರಿಸಿದರು.





