ದಾವಣಗೆರೆ: ಮಧ್ಯ ಕರ್ನಾಟಕದ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಏರಿಕೆ ಕಂಡಿದ್ದು, ಅಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಆ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಡಿಎಚ್‌ಓಗಳಿಗೆ ಆಸ್ಪತ್ರೆಗಳ ಮೇಲೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಡಕ್ ಸೂಚನೆ ನೀಡಿದ್ದಾರೆ.
ಕಳೆದ ಏಳು ತಿಂಗಳಿನಲಿ 135 ನವಜಾತ ಶಿಶುಗಳು ಹಾಗೂ 28 ತಾಯಂದಿರ ಸಾವಾಗಿದೆ. ಖಾಸಗಿ ಆಸ್ಪತ್ರೆಗಳಿಗಿಂತ, ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲೇ ಮರಣ ಪ್ರಮಾಣ ಏರಿಕೆಯಾಗಿದೆ. ಪ್ರತಿ ತಿಂಗಳು 600 ರಿಂದ 700 ಹೆರಿಗೆ ಆಗುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವಾಗುತ್ತಿದೆ. ಇನ್ನೂ ಕಡೇ ಕ್ಷಣದಲ್ಲಿ ತುರ್ತು ಸಂದರ್ಭಗಳ್ಲಲಿ ಬರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಇನ್ನು ಬಹುತೇಕ ಬಡವರೇ ಆಗಮಿಸುವ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಜೇರಿಯನ್ ಪ್ರಮಾಣ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.
ಈ ಹಿನ್ನೆಲೆಯಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣದ ಬಗ್ಗೆ ಎಲ್ಲರೂ ಎಚ್ಚರಿಕೆ ವಹಿಸಬೇಕು. ಪ್ರಾಥಮಿಕ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾ ವಹಿಸುವಂತೆ ಖಡಕ್ ಸೂಚನೆ ನೀಡಿದರು.