ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಅವರಿಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಜನಸಾಮಾನ್ಯರ ದಿನನಿತ್ಯದ ಸರಕುಗಳ ಮೇಲೆ ಜಿಎಸ್‌ಟಿ ವಿಧಿಸಿ, ಎಲ್ಲಾ ಅನಿಲಗಳ ದರವನ್ನು ಹೆಚ್ಚಿಸಿದವರು ಬಿಜೆಪಿಯವರೇ. ಈ ಹಿಂದೆ ಪೆಟ್ರೋಲ್ ಬೆಲೆ 70 ರೂ. ಇದ್ದದ್ದನ್ನು ಹೆಚ್ಚಳ ಮಾಡಿದ್ದು ಬಿಜೆಪಿ, ಆಗೆಯೇ ಅಡುಗೆ ಅನಿಲ ಬೆಲೆ 1,200 ರೂ. ಗೆ ಹೆಚ್ಚಿಸಿದ್ದು ಬಿಜೆಪಿಯೇ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಿದೆ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು. ಆಡಳಿತ ನಡೆಸುವವರು ತೆರಿಗೆ ಸಂಗ್ರಹ ಮಾಡಬೇಕಲ್ಲವೇ? ಬೆಲೆ ಇಳಿಸಲು ಬಿಜೆಪಿಯ 17 ಸಂಸದರು ಕೇಂದ್ರ ಸರ್ಕಾರದ ಮುಂದೆ ಪ್ರತಿಭಟನೆ ಮಾಡಲಿ ಎಂದು ಹೇಳಿದರು.
ತೆರಿಗೆ ಸಂಗ್ರಹ ಮಾಡುವುದು ಸಹಜ. ಆದರೆ ಅದು ಸಾರ್ವಜನಿಕರಿಗೆ ಹೊರೆಯಾಗಬಾರದು. ನಮ್ಮ ರಾಜ್ಯದ ತೈಲ ಬೆಲೆ ಬೇರೆ ರಾಜ್ಯಗಳಿಗಿಂತ ಕಡಿಮೆ ಇದೆ ಎಂದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…