ಬೆಂಗಳೂರು: ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ರಾಜ್ಯದಲ್ಲಿ ತೈಲ ಬೆಲೆಯನ್ನು ಏರಿಕೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು.
ಅವರು ಇಂದು(ಜೂ.16) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು. 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ್ದಾರೆ ಎಂದು ಹೇಳಿದರು.
ಗ್ಯಾರಂಟಿಗಾಗಿ ₹55,000 ಕೋಟಿ ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೊರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ. ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್‌ಗೆ ಮಾನವಿದ್ದರೆ ದರ ಏರಿಕೆ ವಾಪಾಸ್ ಪಡೆಯಲಿ ಎಂದು ಆಗ್ರಹಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…