Mysore
29
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಗ್ಯಾರಂಟಿ ಯೋಜನೆಗಳ ಪುನರ್‌ ಪರಿಶೀಲನೆ ಪಕ್ಕಾ: ಸಚಿವ ಜಿ.ಪರಮೇಶ್ವರ್‌ ಹೇಳಿದ್ದಿಷ್ಟು

ತುಮಕೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ಸಿಗುವಂತಾಗಬೇಕು. ಈ ನಿಟ್ಟಿನ್ಲಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪುನರ್‌ ಪರಿಶೀಲನೆ ನಡೆಸಲು ಸರ್ಕಾರದ ಹಂತದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ತುಮಕೂರಿನಲ್ಲಿಂದು ಶಾಸಕರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬಿಪಿಎಲ್‌ ಮಾನದಂಡ ಇಟ್ಟುಕೊಂಡು ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಲಾಭ ಸಿಗುವಂತೆ ಮಾಡಬೇಕಿದೆ ಎಂದರು.

ಇನ್ನು ಗೃಹಲಕ್ಷ್ಮೀ ಯೋಜನೆಯಲ್ಲಿ ಶ್ರೀಮಂತರೂ ಸೌಲಭ್ಯ ಪಡೆದುಕೊಳ್ಳುತ್ತಿದ್ದು ಇದನ್ನು ತಪ್ಪಿಸಬೇಕಿದೆ. ಎರಡು ಲಕ್ಷ ಸಂಬಳ ಪಡೆಯುತ್ತಿರುವವರೂ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದರು.

ಸಚಿವ ಪರಮೇಶ್ವರ್‌ ಹೇಳಿಕೆಯಿಂದ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ನಡೆಯುವುದು ಪಕ್ಕಾ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಲ್ಲಿ ಪರಿಷ್ಕರಣೆ ಆಗುವ ಎಲ್ಲಾ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Tags:
error: Content is protected !!