ತುಮಕೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ಸಿಗುವಂತಾಗಬೇಕು. ಈ ನಿಟ್ಟಿನ್ಲಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪುನರ್ ಪರಿಶೀಲನೆ ನಡೆಸಲು ಸರ್ಕಾರದ ಹಂತದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಶಾಸಕರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬಿಪಿಎಲ್ ಮಾನದಂಡ ಇಟ್ಟುಕೊಂಡು ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಲಾಭ ಸಿಗುವಂತೆ ಮಾಡಬೇಕಿದೆ ಎಂದರು.
ಇನ್ನು ಗೃಹಲಕ್ಷ್ಮೀ ಯೋಜನೆಯಲ್ಲಿ ಶ್ರೀಮಂತರೂ ಸೌಲಭ್ಯ ಪಡೆದುಕೊಳ್ಳುತ್ತಿದ್ದು ಇದನ್ನು ತಪ್ಪಿಸಬೇಕಿದೆ. ಎರಡು ಲಕ್ಷ ಸಂಬಳ ಪಡೆಯುತ್ತಿರುವವರೂ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದರು.
ಸಚಿವ ಪರಮೇಶ್ವರ್ ಹೇಳಿಕೆಯಿಂದ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ನಡೆಯುವುದು ಪಕ್ಕಾ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ಎದುರಾಗಿದ್ದು, ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಲ್ಲಿ ಪರಿಷ್ಕರಣೆ ಆಗುವ ಎಲ್ಲಾ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…
ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…