ರಾಜ್ಯ

ರಿಯಾಜ್‌ ಬಳಿಯಿದ್ದದ್ದು ಲೈಸೆನ್ಸ್‌ ಗನ್‌: ಸ್ಪಷ್ಟನೆ ನೀಡಿದ ಮಾಜಿ ಶಾಸಕ ದೇವರಾಜ್‌!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ತೆರೆದ ವಾಹನ ಹತ್ತಿ ಮಾಲೆ ಹಾಕಿದ್ದ ವ್ಯಕ್ತಿಯ ಸೊಂಟದಲ್ಲಿ ಗನ್‌ ಪತ್ತೆಯಾಗಿತ್ತು. ಇದು ಸಿಎಂ ಪ್ರಚಾರದ ವೇಳೆ ಭಾರೀ ಪ್ರಮಾಣದ ಭದ್ರತಾ ಲೋಪಕ್ಕೆ ಕಾರಣವಾಗಿತ್ತು. ಈ ಸಂಬಂಧ ಗನ್‌ ಬಳಸಿ ಹತ್ತಿದ್ದ ವ್ಯಕ್ತಿ ರಿಯಾಜ್‌ ಎಂದು ಗುರುತಿಸಲಾಗಿದ್ದು, ಪೊಲೀಸರು ಈ ಸಂಬಂಧ ವಿಚಾರಣೆ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್‌ ಮಾಜಿ ಶಾಸಕ ಆರ್‌.ವಿ ದೇವರಾಜ್‌ ಸ್ಪಷ್ಟನೆ ನೀಡಿದ್ದಾರೆ.

ರಿಯಾಜ್‌ ಕೇವಲ ತನ್ನ ಅತ್ಮರಕ್ಷಣೆಗಾಗಿ ಲೈಸೆನ್ಸ್ ಉಳ್ಳ ಪಿಸ್ಟಲ್ ಇಟ್ಟುಕೊಂಡಿದ್ದಾನೆ, ಮೂರು ವರ್ಷಗಳ ಹಿಂದೆ ಅವನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬಳಿಕ ಪಿಸ್ಟಲ್ ಇಟ್ಟುಕೊಳ್ಳುವ ಪರವಾನಗಿ ಪಡೆದುಕೊಂಡಿದ್ದ ಎಂದು ಸ್ಪಷ್ಟನೆ ನೀಡಿದ್ದಾರೆ.

ರಿಯಾಜ್ ಕಳೆದ 20 ವರ್ಷಗಳಿಂದ ತನಗೆ ಪರಿಚಯ. ಕೋರೋನಾ ಸಂದರ್ಭದಲ್ಲಿ ಬಹಳ ಜನರಿಗೆ ಸಹಾಯ ಮಾಡಿದ್ದಾನೆ. ಚುನಾವಣೆ ಸಮಯದಲ್ಲೂ ಗನ್ ಇಟ್ಟುಕೊಂಡು ತಿರುಗಾಡಲು ವಿಶೇಷ ಅನುಮತಿ ಪಡೆದಿದ್ದಾನೆ ಎಂದು ತಿಳಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

60 mins ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

2 hours ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

2 hours ago

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

3 hours ago

ಎಚ್.ಡಿ.ಕೋಟೆ| ಕಾಡಾನೆ ದಾಳಿ: ಮಹಿಳೆ ಸ್ಥಿತಿ ಗಂಭೀರ

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

3 hours ago

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ…

3 hours ago