r ashok
ಬೆಂಗಳೂರು: ತಜ್ಞರ ಸಮಿತಿ ಸಲ್ಲಿಸಿರುವ ತಾಂತ್ರಿಕ ವರದಿ “ಬಾಡಿಗೆ ಮಾದರಿ” ಬೇಡ ಎಂದು ಶಿಫಾರಸ್ಸು ಮಾಡಿದ್ದರೂ ಸಹ ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲು ₹613 ಕೋಟಿ ರೂಪಾಯಿ ವೆಚ್ಚ ಮಾಡಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಯುಪಿಎ ಅವಧಿಯಲ್ಲಿ ನಡೆದ ಕಾಮನ್ ವೆಲ್ತ್ ಹಗರಣವೇ ಮಾದರಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಯುಪಿಎ ಸರ್ಕಾರದ ಸಾಲು ಸಾಲು ಹಗರಣಗಳು ಹೇಗೆ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಿ ಕೇಂದ್ರದಲ್ಲಿ ಶಾಶ್ವತವಾಗಿ ಅಧಿಕಾರದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿದೆಯೋ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಈ ಬ್ರಹ್ಮಾಂಡ ಭ್ರಷ್ಟಾಚಾರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ಶಾಶ್ವತವಾಗಿ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…