ರಾಜ್ಯ

ಗನ್‌ ತೋರಿಸಿ 8 ಕೋಟಿ ನಗದು,50ಕೆಜಿ ಚಿನ್ನ ದರೋಡೆ

ವಿಜಯಪುರ : ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ ೭ ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.

ಅಂದಾಜು ರೂ. ೮ ಕೋಟಿ ನಗದು, ೫೦ ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ, ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಆದರೆ, ಖಚಿತ ಮಾಹಿತಿ ಇನ್ನೂ ಲಭಿಸಿಲ್ಲ. ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಜನ ನಿಬಿಡ ಪ್ರದೇಶದಲ್ಲಿರುವ ಎಸ್‌ಬಿಐ ಶಾಖೆಯ ಸಿಬ್ಬಂದಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಅಣಿಯಾಗುತ್ತಿದ್ದ ವೇಳೆ ಮಿಲಿಟರಿ ಬಣ್ಣದ ಬಟ್ಟೆ ಧರಿಸಿದ್ದ ದರೋಡೆಕೋರರು ಬ್ಯಾಂಕಿನ ಮುಖ್ಯ ದ್ವಾರದ ಮೂಲಕ ಪ್ರವೇಶಿಸಿದ್ದಾರೆ. ನಾಡ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕ್ ವ್ಯವಸ್ಥಾಪಕ ಮತ್ತು ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿ, ದರೋಡೆ ಮಾಡಿದ್ದಾರೆ. ದರೋಡೆಕೋರರು ಘಟನೆ ಬಳಿಕ ಕದ್ದ ಚಿನ್ನಾಭರಣವನ್ನು ವಾಹನಗಳಲ್ಲಿ ಹೇರಿಕೊಂಡು ಮಹಾರಾಷ್ಟ್ರದತ್ತ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಅಽಕಾರಿಗಳು ಭೇಟಿ ನೀಡಿದ್ದು, ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

10 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

13 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

14 hours ago