ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 7.01 ಕೋಟಿ ಹಣ ಜಪ್ತಿ ಮಾಡಲಾಗಿದೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ ಮುಂದುವರಿಸಲಾಗಿದೆ.
ಇದನ್ನು ಓದಿ: ಬೆಂಗಳೂರು ದರೋಡೆ ಪ್ರಕರಣ ಸೂತ್ರಧಾರ ಮಾಜಿ ಸೈನಿಕನ ಮಗ : ಕೆಲಸವಿಲ್ಲದೆ ಮನೆಯಲ್ಲಿದ್ದ ಆರೋಪಿ
ಪ್ರಕರಣದಲಲಿ ನವೀನ್ ಎಂಬಾತನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಹೈದರಾಬಾದ್‌ನ ಲಾಡ್ಜ್ ಒಂದರಲ್ಲಿ 53 ಲಕ್ಷ ಹಣದ ಜೊತೆಗೆ ಆರೋಪಿ ಸಿಕ್ಕಿಬಿದ್ದಿದ್ದ. ವಿಚಾರಣೆ ವೇಳೆ ಆತ ನೀಡಿದ ಮಾಹಿತಿ ಮೇರೆಗೆ ಕಳೆದ ತಡರಾತ್ರಿ ಕುಪ್ಪಂನ ಮನೆಯೊಂದರಲ್ಲಿ 47 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈವರೆಗೆ ಒಟ್ಟು 7.1 ಕೋಟಿ ಹಣ ರಿಕವರಿ ಮಾಡಲಾಗಿದ್ದು, ಉಳಿದ 10 ಲಕ್ಷ ಹಣಕ್ಕಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.





