ರಾಜ್ಯ

ರೈತರ ಹಿತ ಕಾಯುವಲ್ಲಿ ಬೆಲೆ ಆಯೋಗದ ಪಾತ್ರ ಮುಖ್ಯ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವಲ್ಲಿ ಕೇಂದ್ರ ಕೃಷಿ ಬೆಲೆ ಆಯೋಗದ ಪಾತ್ರ ಬಹಳ‌ ಮಹತ್ವವಾದದ್ದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.

ಕೇಂದ್ರ ಸರ್ಕಾರದ‌ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ
ʼಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿʼ 2025-26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಬೆಳೆಯುವ ಬೆಳೆಗಳಿಗೆ ಉತ್ಪಾದನಾ ವೆಚ್ಚ ಹಾಗೂ ಸಾಗಾಟ, ಮಾರಾಟ ವೆಚ್ಚ ಪರಿಗಣಿಸಿ ವೈಜ್ಞಾನಿಕವಾದ ಬೆಂಬಲ ಬೆಲೆ ನಿಗದಿಯಾಗಬೇಕು, ಡಾ ಸ್ವಾಮಿನಾಥನ್ ಅವರ ವರದಿ ಜಾರಿಯಾಗಬೇಕು ಎಂದು ಸಚಿವರು ಹೇಳಿದರು.

ಜಾಗತಿಕ ಕೃಷಿಯಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯದ ಪಾತ್ರ ಮಹತ್ವದ್ದು. ಅನೇಕ ಏಳು ಬೀಳುಗಳ ನಡುವೆಯೂ ನಾವು ಸ್ಥಿರತೆ ಕಂಡುಕೊಂಡಿದ್ದೇವೆ. ಕಳೆದ ಎರಡು ದಶಕಗಳಲ್ಲಿ ಬಹುತೇಕ ವರ್ಷ ಬರ, ಕೆಲ ವರ್ಷ ಅತಿವೃಷ್ಟಿ ನಮ್ಮನ್ನು ಕಾಡಿದೆ. ಬೆಳೆದ ಬೆಳೆ ಕೈ ಸೇರುತ್ತಿಲ್ಲ, ಇಂತಹ ಸಂದರ್ಭಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕರಗಳೆರೆಡೂ ರೈತರ ಸಂಕಷ್ಟಕ್ಕೆ ‌ಇನ್ನಷ್ಟು ಹೆಚ್ಚು ಸ್ಪಂದಿಸಿ ನೆರವಾಗಬೇಕಿದೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.

ರಾಜ್ಯ ಸರ್ಕಾರ ರೈತರ ಹಿತ ಕಾಯಲು ಅನೇಕ ಪ್ರಮುಖ ಯೋಜನೆ ರೂಪಿಸಿ ಜಾರಿಗೊಳಿಸಿದೆ. ಇದನ್ನು ತಲುಪಿಸುವಲ್ಲಿ ಅಧಿಕಾರಿಗಳ ಜವಾಬ್ದಾರಿ ದೊಡ್ಡದು ಎಂದರು.

ಸುಸ್ಥಿರ ಕೃಷಿಗೆ ಬೆಲೆ ಸ್ಥಿರೀಕರಣದ ಜೊತೆಗೆ ಉತ್ಪಾದನೆ, ಮಾರಾಟವೆಚ್ಚದಲ್ಲಿ ಕಡಿತ ಮುಖ್ಯವಾಗಿದೆ .ಇದಕ್ಕೆ ತಂತ್ರಜ್ಞಾನ, ಯಾಂತ್ರೀಕರಣಗಳ ವರ್ಗಾವಣೆ ಜೊತೆಗೆ ವಿಶ್ವ ವಿದ್ಯಾನಿಲಯಗಳ ಸಂಶೋಧನೆಗಳು ಸುಲಭವಾಗಿ ಕೃಷಿಕರ ನೆಲ ತಲುಪಬೇಕು ಎಂದು ಅವರು ಹೇಳಿದರು.

ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು,ಆಂದ್ರ ಪ್ರದೇಶ ,ತೆಲೆಂಗಾಣ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಕೃಷಿ ಬೆಲೆ ಆಯೋಗದ ಸದಸ್ಯರಾದ ಡಾ. ನವೀನ್ ಪ್ರಕಾಶ್ ಸಿಂಗ್, ರತನ್ ಲಾಲ್ ಡಗ, ಅನುಪಮ್ ಮಿತ್ರ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ನಿರ್ದೇಶಕರಾದ ಡಾ ಜಿ.ಟಿ ಪುತ್ರ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

10 mins ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

14 mins ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

1 hour ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

4 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

4 hours ago