ರಾಜ್ಯ

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಮಾಜಿ ಸಚಿವ ಭೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಾಗೂ ಮಾಜಿ ಸಚಿವ
ಭೈರತಿ ಬಸವರಾಜ್ ಅವರ ಮೇಲೆ ಬಲವಂತದ ಕಾನೂನು ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.

ಮುಂದುವರೆದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠವು, ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ತನಿಖಾಧಿಕಾರಿಗಳಿಗೆ ಈ ಆದೇಶ ನೀಡಿತು. ಜೊತೆಗೆ ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಭೈರತಿ ಬಸವರಾಜು ಅವರಿಗೆ ನಿರ್ದೇಶನ ನೀಡಿದೆ.

ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ಬಿಕ್ಲು ಶಿವ ಕೊಲೆ ಕೇಸ್‍ನಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಜುಲೈ 15, 2025ರಂದು ಬೆಂಗಳೂರಿನ ಹಲಸೂರು ಕೆರೆ ಸಮೀಪದಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿತ್ತು. ಈ ಘಟನೆಗೆ ಸಂಬಂಧಿಸಿದಂತೆ, ಮೃತನ ತಾಯಿ ವಿಜಯಲಕ್ಷ್ಮೀ ದೂರು ದಾಖಲಿಸಿದ್ದರು.

ಜುಲೈ.18ರಂದು ನೀಡಿದ್ದ ಮಧ್ಯಂತರ ಆದೇಶದಂತೆ, ಬೈರತಿ ಜುಲೈ 19ರಂದು ಭಾರತಿನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಎರಡನೇ ಬಾರಿಯೂ ಪೊಲೀಸರಿಂದ ನೋಟಿಸ್ ಪಡೆದು, ಜುಲೈ.23ರಂದು ಮತ್ತೆ ವಿಚಾರಣೆಗೆ ಒಳಗಾಗಿದ್ದರು. ಈ ಎರಡೂ ಸಂದರ್ಭಗಳಲ್ಲಿ, ಶಾಸಕರು ತನಿಖಾಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಿ, ಸಹಕಾರ ನೀಡಿದ್ದಾರೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠವು ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ತನಿಖಾಧಿಕಾರಿಗಳಿಗೆ ಸೂಚಿಸಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

2 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

2 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

3 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

3 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

4 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

4 hours ago