Mysore
32
scattered clouds

Social Media

ಭಾನುವಾರ, 27 ಏಪ್ರಿಲ 2025
Light
Dark

ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ: ದರ್ಶನ್‌ ಹಾಗೂ ಇತರರನ್ನು ಬೇರೆ ಕಾರಾಗೃಹಕ್ಕೆ ಸ್ಥಳಾಂತರಿಸಲು ಸಿಎಂ ತಾಕೀತು

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ.

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

Tags: