ರಾಜ್ಯ

ಕೈದಿಗಳಿಗೆ ರಾಜಾತಿಥ್ಯ : ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆತಂಡ

ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿರುವುದು ಹಾಗೂ ಶಂಕಿತ ಭಯೋತ್ಪಾದಕನಿಗೆ ಸ್ಯಾಟ್‍ಲೈಟ್ ಫೋನ್ ಬಳಕೆ ಪ್ರಕರಣದಲ್ಲಿ ಒಬ್ಬರನ್ನು ಎತ್ತಂಗಡಿ ಮಾಡಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ‌

ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದರೆ ಜೈಲಿನ ಮುಖ್ಯ ಅಧೀಕ್ಷ, ಜೈಲು ಮುಖ್ಯ ಅಧೀಕ್ಷಕ- ಸುರೇಶ್ ಎತ್ತಂಗಡಿಯಾಗಿದ್ದರೆ, ಜೈಲು ಅಧೀಕ್ಷಕ ಮಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಸೇವೆಯಿಂದ ಅಮಾನತುಪಡಿಸಲಾಗಿದೆ.

ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮರುಕಳಿಸುತ್ತಿರುವ ಈ ಪ್ರಕರಣಗಳ ಬಗ್ಗೆ ಕೂಲಂಕುಷ ತನಿಖೆಗೆ ನಡೆಸಿ ಒಂದು ತಿಂಗಳೊಳಗೆ ಸಮಗ್ರ ವರದಿ ನೀಡುವಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೆಂದ್ರ ನೇತೃತ್ವದಲ್ಲಿ ನಾಲ್ವರು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಗಿದೆ.

ಇದನ್ನು ಓದಿ: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಬಿಡುಗಡೆ ಪ್ರಕರಣ: ನಟ ದರ್ಶನ್‌ ಆಪ್ತ ಧನ್ವೀರ್‌ ಸಿಸಿಬಿ ವಶಕ್ಕೆ

ಸೋಮವಾರ ಗೃಹಸಚಿವ ಪರಮೇಶ್ವರ್ ಅವರು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ವಿಡಿಯೋಗಳು ಹೊರಬಂದ ನಂತರ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಹುಟ್ಟಿದೆ. ಜೈಲುಗಳು ಶಿಕ್ಷೆಯ ಸ್ಥಳವಲ್ಲ, ಅಪರಾಧಿಗಳಿಗೆ ಐಷಾರಾಮಿ ಜೀವನ ನಡೆಸುವ ಸ್ಥಳವಲ್ಲ ಎಂದು ಜನರು ಖಂಡಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರು ಇತ್ತೀಚೆಗೆ ಹಿರಿಯ ಜೈಲು ಅಧಿಕಾರಿಗಳ ಸಭೆ ಕರೆದು ತೀವ್ರ ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ವೈರಲ್ ಆಗಿರುವ ಫೋಟೋಗಳು ಮತ್ತು ವಿಡಿಯೋಗಳನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶಿಸಿ, ಅಧಿಕಾರಿಗಳಿಂದ ವಿವರಣೆ ಕೇಳಿದರು. ಈ ರೀತಿಯ ಅಕ್ರಮಗಳಿಗೆ ನಿರ್ಲಕ್ಷ್ಯ ಮಾಡಬಾರದು. ಜೈಲುಗಳು ದೇಶದ ಭದ್ರತೆಗೆ ಧಕ್ಕೆ ತರುವ ಸ್ಥಳವಾಗಬಾರದು ಎಂದು ಒತ್ತಿ ಹೇಳಿದರು.

ಎಲ್ಲಾ ಜೈಲುಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಅವುಗಳನ್ನು ಕೇಂದ್ರ ಕಚೇರಿಗೆ ಸಂಪರ್ಕಿಸಿ ಅವನ್ನು ನಿಗಾವಹಿಸಲು ಬಂಧಿಖಾನೆ ಇಲಾಕೆಯ ಎಡಿಜಿಪಿ ಕಚೇರಿಯಲ್ಲಿ ಕಮ್ಯಾಂಡಿಂಗ್ ಸೆಂಟರ್‍ನ್ನು ಸ್ಥಾಪಿಸಲಾಗುವುದು. ಇದರಿಂದಾಗಿ ಜೈಲಿನ ಚಟುವಟಿಕೆಗಳನ್ನು ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನೇರವಾಗಿ ವೀಕ್ಷಿಸಬಹುದಾಗಿದೆ. ಈ ವ್ಯವಸ್ಥೆ ರೂಪಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

7 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

8 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

8 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

8 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

8 hours ago