Mysore
25
broken clouds
Light
Dark

ಸೆಂಟ್ರಲ್‌ ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ: ಫೋಟೊ ಬಹಿರಂಗವಾಗಿದ್ದು ಹೇಗೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಂಟ್ರಲ್‌ ಜೈಲು ಸೇರಿರುವ ನಟ ದರ್ಶನ್‌ ಕುರ್ಚಿ ಮೇಲೆ ಕುಳಿತು ಒಂದು ಕೈಯಲ್ಲಿ ಟೀ ಹೀರುತ್ತಾ, ಸಿಗರೇಟ್‌ ಸೇದುತ್ತಾ ವಿಲ್ಸನ್‌ ಗಾರ್ಡನ್‌ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೊ ಬಹಿರಂಗವಾಗಿದ್ದಾದರೂ ಹೇಗೆ ಎಂಬ ಪ್ರಶ್ನೆ ಜೈಲಿನ ಸಿಬ್ಬಂದಿಯನ್ನು ಕಾಡುತ್ತಿದೆ. ಇದು  ಸಾರ್ವಜನಿಕರನ್ನು ಕೂಡ ಕೂತುಹಲಕ್ಕೀಡು ಮಾಡಿದೆ.

ಕೊಲೆ ಆರೋಪಿ ದರ್ಶನ್‌, ವಿಲ್ಸನ್‌ ಗಾರ್ಡನ್‌ ನಾಗ, ಕುಳ್ಳ ಸೀನ ಹಾಗೂ ದರ್ಶನ್‌ ಮ್ಯಾನೇಜರ್‌ ಕುಳಿತಿದ್ದ ಫೋಟೊವನ್ನು ರೌಡಿಶೀಟರ್‌ ವೇಲು ಎಂಬಾತ ತೆಗೆದಿದ್ದ. ಅದನ್ನು ತನ್ನ ಪತ್ನಿಗೆ ಕಳುಹಿಸಿದ್ದ. ಆಕೆ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದರು. ಬಳಿಕ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಹೀಗೆ ಫೋಟೊ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ದರ್ಶನ್‌ಗೆ ರಾಜಾತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದೆ ಆರೋಪ್‌ ಅಡಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.