ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಂಟ್ರಲ್ ಜೈಲು ಸೇರಿರುವ ನಟ ದರ್ಶನ್ ಕುರ್ಚಿ ಮೇಲೆ ಕುಳಿತು ಒಂದು ಕೈಯಲ್ಲಿ ಟೀ ಹೀರುತ್ತಾ, ಸಿಗರೇಟ್ ಸೇದುತ್ತಾ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೊ ಬಹಿರಂಗವಾಗಿದ್ದಾದರೂ ಹೇಗೆ ಎಂಬ ಪ್ರಶ್ನೆ ಜೈಲಿನ ಸಿಬ್ಬಂದಿಯನ್ನು ಕಾಡುತ್ತಿದೆ. ಇದು ಸಾರ್ವಜನಿಕರನ್ನು ಕೂಡ ಕೂತುಹಲಕ್ಕೀಡು ಮಾಡಿದೆ.
ಕೊಲೆ ಆರೋಪಿ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ದರ್ಶನ್ ಮ್ಯಾನೇಜರ್ ಕುಳಿತಿದ್ದ ಫೋಟೊವನ್ನು ರೌಡಿಶೀಟರ್ ವೇಲು ಎಂಬಾತ ತೆಗೆದಿದ್ದ. ಅದನ್ನು ತನ್ನ ಪತ್ನಿಗೆ ಕಳುಹಿಸಿದ್ದ. ಆಕೆ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದರು. ಬಳಿಕ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಹೀಗೆ ಫೋಟೊ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ದರ್ಶನ್‌ಗೆ ರಾಜಾತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದೆ ಆರೋಪ್ ಅಡಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…