ರಾಜ್ಯ

RRB: ರೈಲ್ವೆ ಇಲಾಖೆಯಲ್ಲಿದೆ ಬಂಪರ್‌ ಉದ್ಯೋಗಾವಕಾಶ: ಜಸ್ಟ್ ಪಿಯುಸಿ ಪಾಸ್‌ ಆಗಿದ್ರೆ ಸಾಕು…

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಬಂಪರ್‌ ಉದ್ಯೋಗಾವಕಾಶಗಳು ಇದ್ದು, ಉದ್ಯೋಗ ಹುಡುಕುತ್ತಿರುವವರು ಇಂದೇ ಅರ್ಜಿ ಸಲ್ಲಿಸಿ. ರೈಲ್ವೆ ವಿಭಾಗದಲ್ಲಿ ನಾನ್‌ ಟೆಕ್ನಿಕಲ್‌ ಅಂಡರ್‌ ಗ್ರಾಜ್ಯುಯೇಟ್‌ನ 3,445 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ನೇಮಕಾತಿಯಲ್ಲಿ ಒಟ್ಟು 4 ರೀತಿಯ ಹುದ್ದೆಗಳಿದ್ದು, ಅಕೌಂಟ್ಸ್‌ ಕ್ಲರ್ಕ್‌ 361, ಟಿಕೆಟ್‌ ಕ್ಲರ್ಕ್‌ 2022, ಜೂನಿಯರ್‌ ಕ್ಲರ್ಕ್‌ 990 ಹಾಗೂ ಟ್ರೈನ್ಸ್‌ ಕ್ಲರ್ಕ್‌ 72 ಹೀಗೆ 3,445 ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತಿದೆ.

ಈ ವಿಭಾಗದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪಾಸಾಗಿರಬೇಕು. ಪುರುಷ,ಮಹಿಳೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದಾಗಿದೆ. ಆರ್‌ಆರ್‌ಬಿ ಬೆಂಗಳೂರು ವ್ಯಾಪ್ತಿಗೆ ಒಳಪಡುವ 60 ಹುದ್ದೆಗಳಿವೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿದ್ದು, 18 ರಿಂದ 33 ವರ್ಷದವರೆಗಿನರೆಗೂ ಅವಕಾಶವಿರುತ್ತದೆ. ಅಲ್ಲದೇ ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 500 ರೂ.ಶುಲ್ಕವಿದ್ದು, ಎಸ್‌.ಸಿ.ಮತ್ತು ಎಸ್‌.ಟಿ.ಅಭ್ಯರ್ಥಿಗಳಿಗೆ 250 ರೂ.ಶುಲ್ಕ ವಿನಾಯಿತಿ ನೀಡಲಾಗಿದೆ.
ಅ.20ರಂದು ಕೊನೆಯ ದಿನವಾಗಿರುತ್ತದೆ.

ರೈಲ್ವೆ ವಿಭಾಗವು ಎರಡು ಹಂತದಲ್ಲಿ ಪರೀಕ್ಷೆಯನ್ನು ನಡೆಸಲು ನಿರ್ಧರಿದ್ದು ಮೊದಲ ಹಂತ ಕಂಪ್ಯೂಟರ್‌ ಬೇಸ್ಟ್‌ ಟೆಸ್ಟ್‌ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಭರ್ತಿ ನೇಮಕಾತಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು www.rrbbnc.gov.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

1 hour ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

1 hour ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

1 hour ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

2 hours ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

12 hours ago