Mysore
26
scattered clouds
Light
Dark

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ ಕಡಿತ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ‌ ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನೆಲೆ‌ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ʻಎಚ್‌ಡಿಕೆʼ ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ.

ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. (ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ). ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.