ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನೆಲೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ʻಎಚ್‌ಡಿಕೆʼ ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ.
ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. (ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ). ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…