Mysore
21
broken clouds

Social Media

ಸೋಮವಾರ, 26 ಜನವರಿ 2026
Light
Dark

ರಾಜ್ಯದಿಂದ ಪ್ರತಿ ಕ್ವಿಂಟಾಲ್‌ ತೊಗರಿಗೆ ರೂ.450 ಪ್ರೋತ್ಸಾಹಧನ

ಬೆಂಗಳೂರು: ರಾಜ್ಯ ಸರ್ಕಾರವು ಈ ಬಾರಿಯ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಾಲ್‌ ತೊಗರಿಗೆ 450 ರೂ. ಪ್ರೋತ್ಸಾಹ ಧನ ಘೋಷಿಸಿದೆ.

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‌ ತೊಗರಿಗೆ 7,550 ರೂ. ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರದಿಂದ 450 ರೂ. ಪ್ರೋತ್ಸಾಹ ಧನ ಸೇರಿ ತೊಗರಿ ಬೆಳೆಗಾರರಿಗೆ ಒಟ್ಟು 8,000 ರೂ. ದೊರೆಯಲಿದೆ.

ಪ್ರೋತ್ಸಾಹಧನಕ್ಕೆ ಆವಶ್ಯವಿರುವ ಅನುದಾನವನ್ನು ಆವರ್ತ ನಿಧಿಯಿಂದ ಬಳಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

Tags:
error: Content is protected !!