ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ.
ಬೆಂಗಳೂರು ಜಲಮಂಡಳಿ ಬೇಸಿಗೆ ಕಾಲದಲ್ಲಿ ಆಗುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಈಗಾಗಲೇ ಅಧಿಕಾರಿಗಳ ಸಭೆ ಮಾಡಿದ್ದು, ನೀರಿನ ಸಮಸ್ಯೆ ಆಗುವ ಭಾಗದಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಲು ಪ್ಲ್ಯಾನ್ ಮಾಡಿದೆ.
ಅದರ ಜೊತೆಗೆ ನೀರಿನ ಅಭಾವ ಆಗೋದು ಡೌಟ್. ಒಂದು ವೇಳೆ ನೀರಿನ ಅಭಾವ ಆದರೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಜಲಮಂಡಳಿ ಮುಂದಾಗಿದೆ.
ಬೆಂಗಳೂರಿನ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನೀರು ಸದ್ಯ ಕೆಆರ್‌ಎಸ್‌ನಲ್ಲಿ 54 ಟಿಎಂಸಿ ನೀರು ಇದೆ. ಜುಲೈವರೆಗೆ ಬೆಂಗಳೂರಿಗೆ 14 ಟಿಎಂಸಿ ನೀರು ಸಾಕಾಗುತ್ತದೆ. ಆದರೆ ಇಡೀ ಬೆಂಗಳೂರಿಗೆ ಕಾವೇರಿಯ ಜೊತೆಗೆ ಬೋರ್‌ವೆಲ್ ನೀರು ಕೂಡ ಬಹಳ ಪ್ರಮುಖ ಪಾತ್ರವಹಿಸಿದ್ದು, ಬೋರ್‌ವೆಲ್‌ನಲ್ಲಿ ಬೇಸಿಗೆಯಲ್ಲಿ ನೀರು ಕಡಿಮೆಯಾಗುವುದು ನಿಶ್ಚಿತ. ಕಳೆದ ವರ್ಷದಿಂದ ಜಲಮಂಡಳಿಯೇ ಸಂಪೂರ್ಣವಾಗಿ ಬೋರ್‌ವೆಲ್‌ಗಳ ನಿರ್ವಹಣೆ ಮಾಡ್ತಿದ್ದು, ಅಂತರ್ಜಲ ಕುಸಿಯದಂತೆ ಕ್ರಮ ಕೈಗೊಂಡಿದೆ.
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…