ಬೆಂಗಳೂರು : ಸರ್ಕಾರಿ ಸ್ಥಳಗಳು, ಆಟದ ಮೈದಾನ, ಕ್ರೀಡಾಂಗಣಗಳು ಸೇರಿದಂತೆ ಮತ್ತಿತರ ಕಡೆ ಚಟುವಟಿಕೆ ನಡೆಸಲು ಅನುಮತಿ ಅಗತ್ಯ ಎಂದು ಆರ್‌ಎಸ್‌ಎಸ್‌ಗೆ ಪರೋಕ್ಷವಾಗಿ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರದ ವಿರುದ್ಧ ಸಂಘ ಪರಿವಾರ ನೇರಾನೇರ ತೊಡೆತಟ್ಟಿದೆ.
ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಸರ್ಕಾರಿ ಜಾಗಗಳಲ್ಲಿ ನಿಷೇಧ ಹೇರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಇದೇ ೧೯ರಂದು ಬೃಹತ್ ಪಥಸಂಚಲ ನಡೆಸಲಿದೆ.
ವಿಶೇಷವೆಂದರೆ ಸರ್ಕಾರದ ಅನುಮತಿಯನ್ನು ಪಡೆಯಬೇಕೆಂಬ ಪೂರ್ವ ಷರತ್ತನ್ನು ಪಡೆಯದೆ ೧೯ರಂದು ಚಿತ್ತಾರಪುರದಲ್ಲಿ ಸಾವಿರಾರು ಸ್ವಯಂಸೇವಕರು ನಗರದ ಪ್ರಮುಖ ಪಟ್ಟಣಗಳಲ್ಲಿ ಪಥಸಂಚಲನ ನಡೆಸಲಿದ್ದಾರೆ. ಈ ಮೂಲಕ ತವರು ಕ್ಷೇತ್ರದಲ್ಲೇ ಪ್ರಿಯಾಂಕ್ ಖರ್ಗೆ ಸಂಘಪರಿವಾರ ಸಡ್ಡು ಹೊಡೆಯಲಿದೆ.
ಇದನ್ನು ಓದಿ: ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ
ಪಥಸಂಚಲನಕ್ಕೆ ಅಗತ್ಯವಿರುವ ಪೂರ್ವಸಿದ್ದತೆಗಳನ್ನು ರಾಜ್ಯಸಭಾ ಸದಸ್ಯ ನಾರಾಯಣ ಬಾಂಡಗೆ ನೇತೃತ್ವದಲ್ಲಿ ಕೈಗೊಳ್ಳಲಾಗುತ್ತಿದ್ದು, ಅಂದಿನ ಪಥಸಂಚಲನಕ್ಕೆ ಸ್ವಯಂಪ್ರೇರಿತರಾಗಿ ಸಾವಿರಾರು ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಲಾಗಿದೆ.
ರಾಜ್ಯದಲ್ಲಿ ಯಾವುದೇ ಸಂಘಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಚಟುವಟಿಕೆಗಳನ್ನು ನಡೆಸಲು ಸರ್ಕಾರದ ಅನುಮತಿ ಅಗತ್ಯ ಎಂಬ ತೀರ್ಮಾನದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಪಥಸಂಚನ ಇದಾಗಿದೆ. ಇದೊಂದು ಶಕ್ತಿ ಪ್ರದರ್ಶನವೆಂದೇ ಬಿಂಬಿತವಾಗಿದ್ದು, ಚಿತ್ತಾಪುರದ ಪ್ರಮುಖ ಪಟ್ಟಣಗಳಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪಥಸಂಚಲನವನ್ನು ನಡೆಸಲು ಉದ್ದೇಶಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ರಾಜ್ಯಸಭಾ ಸದಸ್ಯ ನಾರಾಯಣ ಬಾಂಡಗೆ, ನಾವು ಯಾವುದೇ ಅನುಮತಿಯನ್ನು ಪಡೆಯದೇ ಪಥಸಂಚಲನ ನಡೆಸುತ್ತೇವೆ. ಸ್ಥಳೀಯ ಸಂಸ್ಥೆಗಳಿಂದಲೂ ಒಪ್ಪಿಗೆ ಪಡೆಯುವುದಿಲ್ಲ, ಹಿಂದೆಯೂ ಪಡೆದಿಲ್ಲ ಮುಂದೆಯೂ ಪಡೆಯುವುದಿಲ್ಲ. ನೋಡೇ ಬಿಡೋಣ ಏನಾಗುತ್ತದೆ ಎಂದು ಬಹಿರಂಗ ಸವಾಲು ಹಾಕಿದ್ದಾರೆ.
ಬಾಂಡಗೆ ಅವರ ಮಾತಿಗೆ ದನಿಗೂಡಿಸಿರುವ ಬಿಜೆಪಿಯ ಅನೇಕ ನಾಯಕರು, ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರ ದೇಶಭಕ್ತ ಸಂಘಟನೆಯಾದ ಆರ್‌ಎಸ್‌ಎಸ್‌ಗೆ ಪರೋಕ್ಷವಾಗಿ ಕಡಿವಾಣ ಹಾಕಲು ಮುಂದಾಗಿದ್ದಾರೆ. ನೀವು ಬೆದರಿಕೆ ಹಾಕಿದಷ್ಟು ಆರ್‌ಎಸ್‌ಎಸ್ ಹೆಮ್ಮರವಾಗಿ ಬೆಳೆಯುತ್ತದೆ. ಎಂದು ಬಿಜೆಪಿ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…