ಮಂಗಳೂರು : ದೇಶ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚಿನಲ್ಲಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಶಾಖೆಗಳಲ್ಲಿ ಕಬಡ್ಡಿ ಮೊದಲಾದ ಆಟಗಳನ್ನು ಆಡಿಕೊಂಡು ತಮಗೂ ಇದಕ್ಕೂ ಸಂಬಂಧವಿಲ್ಲದವರಂತೆ ಇದ್ದರು. ಬ್ರಿಟಿಷರ ಆಡಳಿತಕ್ಕೆ ಸಂಪೂರ್ಣವಾಗಿ ಶರಣಾಗಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ(ಕೆಪಿಸಿಸಿ)ವಕ್ತಾರ ಎಂ.ಜಿ.ಹೆಗಡೆ ಆಪಾದಿಸಿದರು.
ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು ಸ್ವಾತಂತ್ರ ಹೋರಾಟಗಾರರಾದ ಸಾವರ್ಕರ್, ಕೇಳ್ಕರ್, ಮಹಾತ್ಮ ಗಾಂಽ ಅವರನ್ನು ಆರ್‌ಎಸ್‌ಎಸ್‌ನವರು ಬೆಂಬಲಿಸಲಿಲ್ಲ. ಬ್ರಿಟಿಷರ ಎಲ್ಲ ಕಾನೂನುಗಳನ್ನೂ ಆರ್‌ಎಸ್‌ಎಸ್ ಗೌರವಿಸಿತ್ತು ಎಂದು ದೂರಿದರು.
‘ಎದ್ದು ನಿಲ್ಲು ವೀರ ದೇಶ ಕಾದಿದೆ’ ಮೊದಲಾದ ಆರ್ ಎಸ್‌ಎಸ್ ಗೀತೆಗಳು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರಚನೆಯಾಗಿವೆ ಹೊರತು ಸ್ವಾತಂತ್ರ್ಯ ಪೂರ್ವದಲ್ಲಿ ರಚನೆಯಾಗಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ:-ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ಗೆ ತಿಂಗಳಿಗೊಮ್ಮೆ ಹೊದಿಕೆ, ಬಟ್ಟೆ ನೀಡಲು ಕೋರ್ಟ್ ಆದೇಶ
ಆರ್‌ಎಸ್‌ಎಸ್ ಸಂಘಟನೆಯಿಂದ ಗುರು ಪೌರ್ಣಮಿಯಂದು ಸಂಗ್ರಹವಾಗುವ ಗುರು ದಕ್ಷಿಣೆಯ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಆದಾಯ ತೆರಿಗೆ ಇಲಾಖೆ ನಿಯಮದ ಪ್ರಕಾರ ೫೦ ಸಾವಿರ ರೂ. ಗಿಂತ ಹೆಚ್ಚು ದೇಣಿಗೆ ಸಂಗ್ರಹವಾದರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕು. ವಿವಿಧ ಮೂಲಗಳಿಂದ ಬರುವ ಆದಾಯದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿಯನ್ನೂ ನೀಡುತ್ತಿಲ್ಲ. ಇದು ಕಾನೂನು ಬಾಹಿರವಾಗಿದೆ ಎಂದು ಹೇಳಿದರು.
ಆರ್‌ಎಸ್‌ಎಸ್ ಸಂಘಟನೆಯ ೭೦ಕ್ಕೂ ಹೆಚ್ಚು ಅಂಗ ಸಂಸ್ಥೆಗಳು ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿ ನೋಂದಣಿಯಾಗಿವೆ. ಆದರೆ ೧೦೦ ವರ್ಷದ ಇತಿಹಾಸವನ್ನು ಹೊಂದಿರುವ ಸಂಘಟನೆ ಭಾರತದಲ್ಲಿ ಏಕೆ ನೋಂದಣಿಯಾಗಿಲ್ಲ ಎಂದು ಪ್ರಶ್ನಿಸಿದರು.
ಸರ್ಕಾರದ ಕಾನೂನಿನ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘಟನೆ ಕಾರ್ಯಕ್ರಮನಡೆಸಬೇಕಾದರೆ ಸರ್ಕಾರದ ಪೂರ್ವನುಮತಿ ಪಡೆಯುವುದು ಕಡ್ಡಾಯ ಆದರೆ ಆರ್‌ಎಸ್‌ಎಸ್‌ನವರು ಹಲವಾರು ವರ್ಷಗಳಿಂದ ಸರ್ಕಾರಿ, ಅನುದಾನಿತ ಶಾಲೆ ಕಾಲೇಜುಗಳ ಮೈದಾನವನ್ನು ಸಂಘದ ಶಾಖೆಗಳನ್ನು ನಡೆಸಲು ಬಳಸುತ್ತಿರುವುದು ಕಾನೂನು ಬಾಹಿರವಾಗಿದೆ. ಹಾಗಾದರೆ ಕೇಂದ್ರ ಸರ್ಕಾರಿ ಸ್ವಾಮ್ಯದ ಏರ್ ಪೋರ್ಟ್ ಹಾಗೂ ರೈಲ್ವೆ ನಿಲ್ದಾಣಗಳ ಬಳಿ ಶಾಖೆಗಳನ್ನು ಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರಿ ಸ್ವಾಮ್ಯದ ಸ್ಥಳಗಲ್ಲಿ ಬೇರೆ ಸಂಘಟನೆಗಳು ಅನುಮತಿ ಪಡೆಯದೆ ಸಭೆ, ಸಮಾರಂಭಗಳನ್ನು ನಡೆಸಲು ಅನುಮತಿ ನೀಡುತ್ತಾರೆಯೇ ಎಂದು ಪ್ರಶ್ನಿಸಿದರು.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…