ರಾಜ್ಯ

ಪಥಸಂಚಲನವನ್ನು ಆರ್.ಎಸ್.ಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ : ಪ್ರಿಯಾಂಕ್ ಖರ್ಗೆ

ಕಲಬುರಗಿ : ಆರ್ ಎಸ್ ಎಸ್ ನವರು ಪಥಸಂಚಲನೆ ವಿಚಾರ ಕುರಿತು ಪ್ರತಿಷ್ಠೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ ಯ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ತಮ್ಮನ್ನು ಭೇಟಿಯಾದ ವರದಿಗಾರರೊಂದಿಗೆ ಹಾಗೂ ವಿದ್ಯುನ್ಮಾನ ಮಾಧ್ಯದಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಅದೇ ದಿನದಂತೆ ಅಲ್ಲೇ ಪಥಸಂಚಲನ ಮಾಡುತ್ತೇವೆ ಎಂದು ಆರ್ ಎಸ್ ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ ಅಲ್ಲೇ ತಾವೂ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ.‌ ಪ್ರಸ್ತುತ ಈ ವಿಚಾರ ಹೈಕೋರ್ಟ್ ನಲ್ಲಿದೆ. ಹೈಕೋರ್ಟ್ ತಿರ್ಮಾನ ಏನು ಬರುತ್ತದೆಯೋ ಅದನ್ನು ಎಲ್ಲರೂ ಪಾಲಿಸಬೇಕಾಗುತ್ತದೆ ಎಂದರು.

ಪಥಸಂಚಲನದಲ್ಲಿ ಭಾಗವಹಿಸಲು ಕೆಲವರಿಗೆ ಕರೆ ನೀಡಲಾಗಿದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಕಾಲ್ ಮಾಡಿದ್ದಾರೆ. ಆ ಬಗ್ಗೆ ವಿಚಾರಿಸಲಾಗಿ , ಅವರಿಗೆ ದೇಶಭಕ್ತಿ ಇತ್ಯಾದಿ ಕುರಿತು ಹೇಳಲಾಗುತ್ತಿದೆ ಎನ್ನುವುದನ್ನು ಹೊರತುಪಡಿಸಿ ಬೇರೆ ಹೇಳಿರಲಿಲ್ಲ ಎನ್ನುವ ಮಾಹಿತಿ ಬಂದಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಹಾಗೂ ಸಮಾಜದ ಶಾಂತಿ ಕಾಪಾಡಲು
ಆರ್ ಎಸ್ ಎಸ್ ಅಷ್ಟೇ ಅಲ್ಲ ಬೇರೆ ಯಾವುದೇ ಸಂಘಟನೆಗಳಿಗೂ ಸರ್ಕಾರಿ ಜಾಗ ಬಳಸಿಕೊಳ್ಳದಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಅದರಲ್ಲೇನು ತಪ್ಪಿದೆ ? ಎಂದರು.

ಇದನ್ನು ಓದಿ: ಸಿಎಂ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ; ಸಚಿವ ಎಚ್‌.ಸಿ ಮಹದೇವಪ್ಪ

ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಕಾರ್ಯಕ್ರಮ ನಡೆಸದಂತೆ ಹೈಕೋರ್ಟ್ ಆದೇಶ ಇದೆ. ಆದರೆ, ಬೆಂಗಳೂರಿನಲ್ಲಿ ಆರ್ ಎಸ್ ಎಸ್ ನವರು ಪೊಲೀಸರ ಅನುಮತಿ ಪಡೆಯದೆ ಕೇವಲ ಮಾಹಿತಿಗಾಗಿ ಎಂದು ಬರೆದಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ. ಯಾರಾದರೂ ಸಾವಿರಾರು ಜನರು ಸೇರಬೇಕಾದರೆ ಪೊಲೀಸ್ ಇಲಾಖೆ ಅನುಮತಿ ಪಡೆಯಬೇಕೇ ಹೊರತು ಮಾಹಿತಿ ನೀಡುವಂತಿಲ್ಲ. ಆರ್ ಎಸ್ ಎಸ್ ಇದನ್ನು ಅನುಸರಿಸುವುದಾದರೆ, ನಾವೂ ಅನುಸರಿಸುತ್ತೇವೆ ಎಂದು ಇತರರು ಪ್ರಶ್ನೆ ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಸರ್ಕಾರದ ಆದೇಶದ ನಂತರ, ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ನನ್ನ ಮೇಲೆ‌ ಮುಗಿಬಿದ್ದರು. ಬಿಜೆಪಿಗೂ ಆರ್ ಎಸ್ ಎಸ್ ಗೂ ಏನು ಸಂಬಂಧ.? ನಾನು ಪತ್ರ ಬರೆದ ನಂತರ ಸಾವಿರಾರು ಕರೆಗಳು ಬಂದವು. ಖರ್ಗೆ ಇದನ್ನು ಬಿಜೆಪಿಯವರು ಪ್ರಚಾರಕ್ಕೆ ಮಾಡುತ್ತಿದ್ದಾರೆ ಎಂದರು. ನಾನು ಸರ್ಕಾರದಲ್ಲಿ‌ ಸಚಿವನಾಗಿದ್ದೇನೆ‌ ನನಗೆ ಯಾಕೆ ಪ್ರಚಾರ? ಒಬ್ಬ ಕಾಲ್ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ವರ್ಗದವರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಬಿಜೆಪಿಯ ಯಾರೊಬ್ಬರೂ ಖಂಡಿಸಲಿಲ್ಲ. ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಅವನನ್ನು ಅರೆಸ್ಟ್ ಮಾಡಿದ್ದಾರೆ. ನನಗೆ ಕರೆ ಮಾಡಿದ ವ್ಯಕ್ತಿ ತನ್ನ ಕಣಕಣದಲ್ಲಿಯೂ ಆರ್ ಎಸ್ ಎಸ್ ಇದೆ ಅಂದಿದ್ದಾನೆ. ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ. ತನಿಖೆ‌ ನಡೆಯುತ್ತಿದೆ. ಅರೆಸ್ಟ್ ಆದ ವ್ಯಕ್ತಿ ಬಡ ಕುಟುಂಬದವನು. ಆತನನ್ನು ಪ್ರಚೋದಿಸಿದವರು ಯಾರು ಅವರಿಗೂ ಶಿಕ್ಷೆಯಾಗಬೇಕಲ್ಲವೇ? ಎಂದರು.

ಕಲಬುರಗಿ ಸೇರಿದಂತೆ ಎಲ್ಲ ಕಡೆ ಮಾಹಿತಿ ನೀಡಿದ್ದಾರೆ ಹೊರತು ಅನುಮತಿ ಕೇಳಿಲ್ಲ. ಇವರು ಕೇಳಿದ ತಕ್ಷಣ ಭದ್ರತೆ ಕೊಡಲು ಪೊಲೀಸರಿಗೇನು ಕೆಲಸ ಇಲ್ಲವಾ? ಚಿತ್ತಾಪುರದಲ್ಲಿ ಅನುಮತಿ ನಿರಾಕರಿಸಿದ್ದರಿಂದ ಹೈಕೋರ್ಟ್ ಗೆ ಹೋದರು. ಇತರರು ಕೂಡಾ ನಮಗೂ ಅನುಮತಿ ಕೊಡಿ ಎಂದರು. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಕೈಯಲ್ಲಿ ದೊಣ್ಣೆ ಹಿಡಿದು ಪಥಸಂಚಲನ ಮಾಡಿದರೆ, ಸಾರ್ವಜನಿಕರಿಗೆ ಭೀತಿ ಆಗುವುದಿಲ್ಲವಾ? ಏನಾದರೂ ಹೆಚ್ಚು‌ಕಮ್ಮಿಯಾದರೆ ಯಾರು ಜವಾಬ್ದಾರರು? ಎಂದು ಪ್ರಶ್ನಿಸಿದರು.

ಬೇರೆ ಬೇರೆ ಕಡೆ ನಡೆದ ಪಥಸಂಚಲನದಲ್ಲಿ ಭಾಗಿಯಾದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ವೀಸ್ ರೂಲ್ಸ್ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ‌ ಆದೇಶ ರಾಜ್ಯ ಸರ್ಕಾರದ ನೌಕರರಿಗೂ ಅನ್ವಯವಾಗುತ್ತದೆ ಎಂದು‌ ಭಾವಿಸಿದ್ದಾರೆ. ಅದು ಹಾಗೆ ಆಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ಈ ಎಲ್ಲ ಬೆಳವಣಿಗೆ ನಂತರ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ಮಾಡಲಿ ಬಿಡಿ. ಪ್ರಶ್ನೆ ಎತ್ತಿದ್ದು ನಾನೇ ತಾನೆ. ಬೇರೆಯವರ ಐಡಿಯಾಲಜಿ ಬಗ್ಗೆ ನಾನು ಹೇಳುವುದಿಲ್ಲ. ನನ್ನ ಐಡಿಯಾಲಜಿ, ಸಿಎಂ ಅವರ ಐಡಿಯಾಲಜಿ, ಖರ್ಗೆ ಸಾಹೇಬರ ಐಡಿಯಾಲಜಿ, ರಾಹುಲ್ ಗಾಂಧಿಯವರ ಐಡಿಯಾಲಜಿ ಸರಿ‌ ಇದೆಯಲ್ಲ ಅಷ್ಟು ಸಾಕು ಎಂದರು.

ಸೇಡಂ‌ನಲ್ಲಿ ಕಾನೂನು ಉಲ್ಲಂಘನೆ ಮಾಡಿ ಪಥ ಸಂಚಲನ ಮಾಡಿದ್ದಾರೆ. ಅದನ್ನು ಕೋರ್ಟ್ ಗಮನಕ್ಕೆ ತರಲಾಗುವುದು ಎಂದ ಸಚಿವರು ಎಲ್ಲವೂ ಪರಿಗಣನೆ ಆಗುತ್ತದೆ ಎಂದ ಸಚಿವರು, ಅಂದಿನ ಶಾಂತಿ ಸಭೆಯಲ್ಲಿ ಆರ್ ಎಸ್ ಎಸ್ ಬದಲು ಬಿಜೆಪಿಯವರಿಗೇನು ಕೆಲಸ? ಅಶೋಕ್ ಪಾಟೀಲ್ ಯಾಕೆ ಅಂದಿನ ಶಾಂತಿ ಸಭೆಗೆ ಹೋಗಿಲ್ಲ.? ಅವರ ಬದಲು ಬಿಜೆಪಿಯವರು ಯಾಕೆ ಹೋಗಿದ್ದರು? ಅವರು ಶಾಂತಿ ಸಭೆಗೆ ಬಂದಿದ್ದರೋ ಅಥವಾ ಭಂಗ ಉಂಟು ಮಾಡಲು ಬಂದಿದ್ದರೋ? ಎಂದು ಪ್ರಶ್ನಿಸಿದರು.

ಇದನ್ನು ಓದಿ: ದೇಶ ಪ್ರೇಮದ ಢೋಂಗಿ ಭಾಷಣ ಮಾಡುವ RSS, BJP : ಸಿಎಂ ಸಿದ್ದರಾಮಯ್ಯ ಟೀಕೆ

ಆರ್ ಎಸ್ ಎಸ್ ಪಥಸಂಚಲನ ವಿಚಾರದಲ್ಲಿ ಗೊಂದಲ ಸೃಷ್ಠಿಸುತ್ತಿರುವವರು ಯಾರು ? ಲಾಠಿ ಹಿಡಿಯುವ ವಿಚಾರದಲ್ಲಿ‌ ಎಲ್ಲಾ ಕಡೆ ಏನೂ ತಕರಾರು ಇಲ್ಲ ಚಿತ್ತಾಪುರದಲ್ಲಿ ಮಾತ್ರವೇ ಯಾಕೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿತ್ತಾಪುರದಲ್ಲಿ ಕಾನೂನು ಇದೆ. ಹಾಗೆ ಎಲ್ಲ‌ಕಡೆಯೂ ಇದೆ. ಆದರೆ‌ ಚಿತ್ತಾಪುರ ಯುವಕರ ಭವಿಷ್ಯದ ಪ್ರಶ್ನೆ ಬಂದಾಗ ಕಾನೂನು ಪ್ರಕಾರ ಕ್ರಮ ಜರುಗಿಸಲಾಗಿದೆ. ಈಗ ವಿಚಾರ ಹೈಕೋರ್ಟ್ ನಲ್ಲಿದೆ. ಲಾಠಿ‌ಹಿಡಿದುಕೊಂಡು ಪಥಸಂಚಲನ ನಡೆಸಲು ಅನುಮತಿ ನೀಡಿದರೆ‌ ನಮ್ಮದೇನು ಅಭ್ಯಂತರವಿಲ್ಲ.

ಆರ್ ಎಸ್ ಎಸ್ ನೋಂದಣಿ ಪತ್ರದ ವಿಚಾರ ಕುರಿತಂತೆ ಹೈಕೋರ್ಟ್ ನಲ್ಲಿ ಸರಿಯಾದ ಸಮಯದಲ್ಲಿ ಪ್ರಶ್ನೆ ಮಾಡಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ. ಅನುಮತಿ‌ ಸಿಕ್ಕರೆ ನೋಂದಣಿ ವಿಚಾರದಲ್ಲಿಯೂ ಕಾನೂನು ಪ್ರಕಾರ ನೋಡಿಕೊಳ್ಳಲಾಗುವುದು ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗುತ್ತಾರೆ ಎನ್ನುವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು, ಯಾರು ಸಿಎಂ ಆಗಬೇಕು ಅಂತ ನಿರ್ಧಾರ ಮಾಡುತ್ತಾರೆಯೇ? ಎಂದರು.

ನವೆಂಬರ್ ಕ್ರಾಂತಿ ಏನೂ ನಡೆಯಲ್ಲ. ಉತ್ತರಾಧಿಕಾರಿ ವಿಚಾರದಲ್ಲಿ ಯತೀಂದ್ರ ಅವರ ಹೇಳಿಕೆ‌ ಅದು ಅವರು ವೈಯಕ್ತಿಕ‌ ವಿಚಾರ. ಸಿಎಂ ಮುಂದಿನ ಚುನಾವಣೆ ನಿಲ್ಲುವ ವಿಚಾರ ಅದು ಅವರು ವೈಯಕ್ತಿಕ ವಿಚಾರ. ಎಲ್ಲಾ ಸಮಾಜದವರು ಸಿಎಂ ಆಗಬೇಕು ಎಂದು ಬಯಸುತ್ತಾರೆ.‌ ದಲಿತ ಸಿಎಂ ವಿಚಾರ ಕೂಡಾ ಹಾಗೆ. ಅದನ್ನು ಎಲ್ಲಿ ಚರ್ಚೆ ನಡೆಸಬೇಕೋ ಅಲ್ಲೇ ನಡೆಸಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ಪ್ರಿಯಾಂಕ್ ಖರ್ಗೆ ಡಿಸಿಎಂ ಆಗುವುದಕ್ಕೆ ಆರ್ ಎಸ್ ಎಸ್ ನ್ನು ಟೀಕಿಸುತ್ತಿದ್ದಾರೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಆರ್ ಎಸ್ ಎಸ್ ನ್ನು ಟೀಕಿಸಿದರೆ ಡಿಸಿಎಂ ಆಗುವುದಾದರೆ‌ ಡಿಸಿಎಂ ಯಾಕೆ ಸಿಎಂ ಮಾಡಲಿ ಬಿಡಿ ಎಂದರು.

ಕಲಬುರಗಿಯಲ್ಲಿ ತಳವಾರ ಸಮಾಜದ ಪ್ರತಿಭಟನೆ ವಿಚಾರ, ಬೆಂಗಳೂರಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಸಧ್ಯದಲ್ಲೇ ಕೋಲಿ ಕಬ್ಬಲಿಗ ಹಾಗೂ ತಳವಾರ ಸಮುದಾಯವನ್ನು ಎಸ್ ಟಿ ಸೇರಿಸುವ ವಿಚಾರ ಸುದೀರ್ಘ ಚರ್ಚೆ ನಡೆಸಲಾಗುವುದು ಎಂದರು.

ಕಲಬುರಗಿ ಜಿಲ್ಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರು ಇಲ್ಲ ಅಂತ ಅಲ್ಲ. ಆದರೆ ಆಯ್ಕೆ ಸಮಿತಿ ಮಾನದಂಡಗಳನ್ನು ಅನುಕರಿಸಿ ಆಯ್ಕೆ ಮಾಡಲಾಗಿದೆ ಎಂದರು.

ಬೀದಿನಾಯಿಗಳ ಹಾವಳಿ ತಪ್ಪಿಸಲು ಕ್ರಮವಹಿಸಲಾಗುತ್ತಿದೆ. ಇದಕ್ಕಾಗಿ ರೂ 5 ಕೋಟಿ‌ ಅನುದಾನ ನೀಡಲಾಗುತ್ತಿದೆ. ನಾಯಿಗಳ ಸೆಡ್ ನಿರ್ಮಾಣ ಮಾಡಿ ಅವುಗಳನ್ನು ಸುಸ್ಥಿತವಾಗಿ ಇರಿಸಲಾಗುವುದು ಎಂದು ಸಚಿವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

27 mins ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

37 mins ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

5 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

5 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

5 hours ago