Mysore
15
broken clouds

Social Media

ಗುರುವಾರ, 22 ಜನವರಿ 2026
Light
Dark

ಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ: ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ

ಬೆಂಗಳೂರು: ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಆರ್‌ಎಸ್‌ಎಸ್‌ ತನ್ನ 10ನೇ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಐಟ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿ 100 ವರ್ಷಗಳು. ಸ್ವಾತಂತ್ರ್ಯ ಚಳುವಳಿಗೆ ದ್ರೋಹ ಬಗೆದು 100 ವರ್ಷಗಳು. ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು. ರಾಷ್ಟ್ರ ವಿರೋಧಿಗಾಗಿ 100 ವರ್ಷಗಳು. ಭಾರತ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್‌ ಮುಖ್ಯ ಕಾರ್ಯದರ್ಶಿಗೆ ಫೆಬ್ರವರಿ.24, 1948ರಂದು ಬರೆದ ಪತ್ರ ಇಲ್ಲಿದೆ. ಇದರಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಹೇಗೆ ಅವಮಾನಿಸಿದೆ ಎಂಬುದನ್ನು ದಾಖಲಿಸಲಾಗಿದೆ.

ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್‌

ಇತಿಹಾಸವು ನಮ್ಮ ದೇಶಕ್ಕೆ ಆರ್‌ಎಸ್‌ಎಸ್‌ ಮಾಡಿದ ನಿರ್ಲಕ್ಷ್ಯ ದ್ರೋಹದ ನಿದರ್ಶನಗಳಿಂದ ತುಂಬಿದೆ. ಇಡೀ ಬಿಜೆಪಿ ಇಕೋ ಸಿಸ್ಟಂ ಎಷ್ಟೇ ಪ್ರಯತ್ನಿಸಿದರೂ ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಎಂಬ ಇತಿಹಾಸವನ್ನು ಅಳಿಸಿಹಾಕಲು ಅವರಿಗೆ ಎಂದಿಗೂ ಸಾಧ್ಯವಾಗುವುದಿಲ್ಲ.

ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್‌ ಚರಿತ್ರೆಯನ್ನು ತಿಳಿದುಕೊಳ್ಳುವ ಸಮಯ ಬಂದಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Tags:
error: Content is protected !!