ಬೆಂಗಳೂರು: ಆರ್‌ಎಸ್‌ಎಸ್ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಆರ್‌ಎಸ್‌ಎಸ್ ತನ್ನ 10ನೇ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಐಟ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿ 100 ವರ್ಷಗಳು. ಸ್ವಾತಂತ್ರ್ಯ ಚಳುವಳಿಗೆ ದ್ರೋಹ ಬಗೆದು 100 ವರ್ಷಗಳು. ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು. ರಾಷ್ಟ್ರ ವಿರೋಧಿಗಾಗಿ 100 ವರ್ಷಗಳು. ಭಾರತ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್ ಮುಖ್ಯ ಕಾರ್ಯದರ್ಶಿಗೆ ಫೆಬ್ರವರಿ.24, 1948ರಂದು ಬರೆದ ಪತ್ರ ಇಲ್ಲಿದೆ. ಇದರಲ್ಲಿ ಆರ್‌ಎಸ್‌ಎಸ್ ರಾಷ್ಟ್ರಧ್ವಜವನ್ನು ಹೇಗೆ ಅವಮಾನಿಸಿದೆ ಎಂಬುದನ್ನು ದಾಖಲಿಸಲಾಗಿದೆ.
ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ರಿಯಾಕ್ಷನ್
ಇತಿಹಾಸವು ನಮ್ಮ ದೇಶಕ್ಕೆ ಆರ್‌ಎಸ್‌ಎಸ್ ಮಾಡಿದ ನಿರ್ಲಕ್ಷ್ಯ ದ್ರೋಹದ ನಿದರ್ಶನಗಳಿಂದ ತುಂಬಿದೆ. ಇಡೀ ಬಿಜೆಪಿ ಇಕೋ ಸಿಸ್ಟಂ ಎಷ್ಟೇ ಪ್ರಯತ್ನಿಸಿದರೂ ಆರ್‌ಎಸ್‌ಎಸ್ ಸಂವಿಧಾನ ವಿರೋಧಿ ಎಂಬ ಇತಿಹಾಸವನ್ನು ಅಳಿಸಿಹಾಕಲು ಅವರಿಗೆ ಎಂದಿಗೂ ಸಾಧ್ಯವಾಗುವುದಿಲ್ಲ.
ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್ ಚರಿತ್ರೆಯನ್ನು ತಿಳಿದುಕೊಳ್ಳುವ ಸಮಯ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…