Mysore
15
clear sky

Social Media

ಶನಿವಾರ, 24 ಜನವರಿ 2026
Light
Dark

RSS ಪಥಸಂಚಲನ | ಅ.28ಕ್ಕೆ ಶಾಂತಿ ಸಭೆ ; 30ಕ್ಕೆ ನಿರ್ಧಾರ ತಿಳಿಸಿ ಎಂದ ಕೋರ್ಟ್‌

ಕಲಬುರಗಿ : ಇದೇ ನವೆಂಬರ್ 2ರಂದು ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್​ಎಸ್​​ಎಸ್​​ಗೆ ನಿರಾಸೆಯಾಗಿದೆ. ಆರ್​ಎಸ್​ಎಸ್​ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ, ಸರ್ಕಾರಕ್ಕೆ ಕೆಲ ಸಲಹೆ ಸೂಚನೆಗಳನ್ನು ನೀಡಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ.

ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್ 30ರಂದು ವರದಿ ನೀಡುವಂತೆ ಕೋರ್ಟ್ ತಿಳಿಸಿದ್ದು, ಈ ವರದಿ ಆಧಾರದ ಮೇಲೆ ಕೋರ್ಟ್ ತೀರ್ಪು ನೀಡಲಿದೆ. ಇನ್ನು ನವೆಂಬರ್ 2ರಂದು ಪಥಸಂಚಲನಕ್ಕೆ ಕೋರ್ಟ್ ಇಂದು ಅನುಮತಿ ನೀಡುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ ಆರ್​​ಎಸ್​​ಸ್​​ ಮುಖಂಡರಿಗೆ ಕೊಂಚ ನಿರಾಸೆಯಾಗಿದೆ.

ಸರ್ಕಾರದ ಪರ ವಾದ ಮಂಡಿಸಿದ ವಕೀಲ ಎಜಿ ಶಶಿಕಿರಣ್‌ ಶೆಟ್ಟಿ, ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ 2 ಅಭಿಪ್ರಾಯಗಳನ್ನು ನೀಡಿದ್ದಾರೆ. ಜನರಿಗೆ ತೊಂದರೆಯಾಗುವ ಬಗ್ಗೆ ಕಲಬುರಗಿ ಎಸ್‌ಪಿ ವರದಿ ನೀಡಿದ್ದಾರೆ. ಪಥಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ. ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತವೆಂದು ವರದಿಯಿದೆ. ಇದರಿಂದ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿಯಿದೆ ಎಂದು ಮಂಡಿಸಿದರು.

ಇದನ್ನು ಓದಿ: ಆರ್‌ಎಸ್‌ಎಸ್‌ನಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ: ಸಂಸದ ಜಗದೀಶ್‌ ಶೆಟ್ಟರ್‌

ಕೋರ್ಟ್‌ ಅಕ್ಟೋಬರ್‌ 28 ರಂದು ಚಿತ್ತಾಪುರದಲ್ಲಿ ಶಾಂತಿ ಸಭೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಕೋರ್ಟ್ ಸೂಚನೆಯಂತೆ ಸರ್ಕಾರ ಅಕ್ಟೋಬರ್ 28ರಂದು ಸಭೆ ನಡೆಸಿ ಚಿತ್ತಾಪುರದಲ್ಲಿ ಸ್ಥಿತಿಗತಿ ಬಗ್ಗೆ ಅಕ್ಟೋಬರ್ 30ರೊಳಗೆ ವರದಿ ನೀಡಬೇಕಿದೆ. ಬಳಿಕ ಕೋರ್ಟ್, ಈ ವರದಿ ಆಧಾರದ ಮೇಲೆ ಆದೇಶ ನೀಡಲಿದೆ. ಹೀಗಾಗಿ ಸರ್ಕಾರ ವರದಿಯಲ್ಲಿ ಏನಂತ ನೀಡಲಿದೆ? ಕೋರ್ಟ್ ಯಾವ ತೀರ್ಪು ನೀಡಲಿದೆ ಎನ್ನುವ ಕುತೂಹಲ ಮೂಡಿಸಿದೆ.

ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್​ಎಸ್​ಎಸ್​ ಪಥಸಂಚಲನ ಮಾಡಲು ಈಗಾಗಲೇ ಕೋರ್ಟ್ ಮುಂದೆ ಹೇಳಿದ್ದು, ಇದಕ್ಕೆ ಕೋರ್ಟ್ ಸಹ ಹೊಸ ಅರ್ಜಿ ಸಲ್ಲಿಸುವಂತೆ ಹೇಳಿತ್ತು. ಆದ್ರೆ. ಆರ್​​ಎಸ್​ಎಸ್​ ಜೊತೆಗೆ ಇನ್ನುಳಿದ ಏಳು ಬೇರೆ ಬೇರೆ ಸಂಘಟನೆಗಳು ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ಮಾಡಲು ಅನುಮತಿ ನೀಡುವಂತೆ ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಮಾಡಿವೆ. ಹೀಗಾಗಿ ಯಾರಿಗೆ ಕೊಡಬೇಕೋ ಯಾರಿಗೆ ಬಿಡಬೇಕೆನ್ನುವುದೇ ದೊಡ್ಡ ಗೊಂದಲ ಏರ್ಪಟ್ಟಿದೆ.

ಕೊನೆಗೆ ಜಿಲ್ಲಾಡಳಿ ಏಳು ಸಂಘಟನೆಗಳು ಅರ್ಜಿ ಸಲ್ಲಿಸಿದ್ದು, ಹೀಗಾಗಿ ಸದ್ಯಕ್ಕೆ ಯಾವುದೇ ಸಂಘ-ಸಂಘಟನೆಗಳಿಗೆ ನವೆಂಬರ್ 2ರಂದು ಪಥಸಂಚಲನ ಮಾಡಲು ಅನುಮತಿ ನೀಡಬಾರದು ಎಂದು ವರದಿಯಲ್ಲಿ ತಿಳಿಸಿದೆ ಎಂದು ಸ್ವತಃ ಸರ್ಕಾರದ ಪರ ವಕೀಲರು ಕೋರ್ಟ್ ಮುಂದೆ ತಿಳಿಸಿದ್ದಾರೆ. ವಾದ-ವಿವಾದ ಆಲಿಸಿದ ಪೀಠ ವಿಚಾರಣೆಯನ್ನು ಅಕ್ಟೋಬರ್‌ 30 ಕ್ಕೆ ಮುಂದುಡಿದೆ.

Tags:
error: Content is protected !!