ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್‌ಎಸ್‌ಎಸ್‌ನವರು ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನು ಓದಿ : ಯತೀಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್ ಸಿಂಹ
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು. ಅವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದರು.





