ಗದಗ: ಸತತ 30 ವರ್ಷಗಳ ಕಾಲ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾಗಿದ್ದ ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್‌ಎಸ್‌ಎಸ್ ಸಮವಸ್ತ್ರ ಧರಿಸಿಯೇ ಬಂದು ಕಾಂಗ್ರೆಸ್ ಸೇರಿದ್ದಾರೆ.
ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಅವರು ಆರ್‌ಎಸ್‌ಎಸ್ ಸ್ವಯಂ ಸೇವಕರಾಗಿದ್ದು, ಕಾಂಗ್ರೆಸ್ ಸೇರ್ಪಡೆಗೊಂಡರು. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಸಂಘದ ಸಮವಸ್ತ್ರದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಆರ್‌ಎಸ್‌ಎಸ್ ಸಮವಸ್ತ್ರ ಧರಿಸಿ ಕಾಂಗ್ರೆಸ್ ಸೇರಿದ ವಿಡಿಯೋ ಇದೀಗ ಜಾಲತಾಣದಲ್ಲಿ ವೈರಲ್ ಆಗಿದೆ.