ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು ದಾವಣಗೆರೆಯಿದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ನಿನ್ನೆ ಬಜೆಟ್ ಅಧಿವೇಶನ ಮುಗಿಸಿ ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜೆ.ಜೆ.ಹಳ್ಳಿ ಬಳಿ ಅಪಘಾತ ಸಂಭವಿಸಿದೆ.
ಕೂಡಲೇ ರುದ್ರಪ್ಪ ಲಮಾಣಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಈಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮಾಹಿತಿಯ ಪ್ರಕಾರ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಧ್ಯಾಹ್ನದ ವೇಳೆಗೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.





