Mysore
19
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಕೋಳಿ ಮೊಟ್ಟೆಗಳ ಸ್ಯಾಂಪಲ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾವುದೇ ಲೋಪ ಕಂಡುಬಂದಿಲ್ಲ. ದರೂ ಇಂತಹ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದ ಇರುವುದು ಸೂಕ್ತ. ಅನಾವಶ್ಯಕ ವಿಚಾರಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಹೇಳಿದರು.

ಇನ್ನು ಕಳೆದ 11 ತಿಂಗಳಿನಲ್ಲಿ ರಾಜ್ಯದಲ್ಲಿ 2134 ಧೃಡೀಕೃತ ಇಲಿ ಜ್ವರ ಪ್ರಕರಣಗಳು ವರದಿಯಾಗಿವೆ. ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಶೇಕಡಾ.1ರಷ್ಟು ಪ್ರಕರಣಗಳು ಕಡಿಮೆಯಾಗಿದ್ದು, ಈ ಬಗ್ಗೆ ಸಂಪೂರ್ಣವಾಗಿ ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದರು.

Tags:
error: Content is protected !!