ಬೆಂಗಳೂರು: ಖಡಕ್ ಐಪಿಎಸ್ ಅಧಿಕಾರಿ ಎಂದು ಗುರುತಿಸಿಕೊಂಡಿರುವ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ (ಎಸ್ಎಚ್ಡಿಸಿ)ದ ನಿರ್ದೇಶಕರಾದ ಡಿ.ರೂಪಾ ಮುದ್ಗಲ್ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.
ಐದು ಲಕ್ಷ ರೂ.ಗಳಿಗೂ ಮೇಲ್ಪಟ್ಟ ಟೆಂಡರ್ ನೀಡಬೇಕಾದರೆ ನಿಗಮದ ಅಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ತರಬೇಕು ಎಂಬ ನಿಯಮ ಇದ್ದರೂ ಆರು ಕೋಟಿಗೂ ಹೆಚ್ಚು ಹಣ ವೆಚ್ಚ ಮಾಡಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಿ.ರೂಪಾ ಅವರಿಗೆ 76 ಕ್ಕೂ ಹೆಚ್ಚು ಬಾರಿ ನೋಟಿಸ್ ನೀಡಿದ್ದರೂ ಯಾವುದಕ್ಕೂ ಉತ್ತರಿಸಿರಲಿಲ್ಲ. ವಾರಕ್ಕೆ ಎರಡು ದಿನ ಮಾತ್ರ ಕಚೇರಿಗೆ ಬರುತ್ತಿದ್ದು, ಕಚೇರಿ ಕಡತಗಳನ್ನು ಮನೆಗೆ ತರಿಸಿಕೊಳ್ಳುತ್ತಿದ್ದಾರೆ ಎಂದು ಆರು ಪುಟಗಳ ದೂರಿನಲ್ಲಿ ಉಲೇಖಿಸಿದ್ದಾರೆ.
ಹೈದಾರಾಬಾದ್ ಶೋರೂಂಗೆ ಮಾಡಿದ ವೆಚ್ಚ, ಹಂಪಿಗೆ ಕೇಂದ್ರ ಸರ್ಕಾರದಿಂದ ಬಂದ ಅನುದಾನದ ಬಗ್ಗೆ ನಿಗಮದ ಗಮನಕ್ಕೆ ತಾರದೆ ಟೆಂಡರ್ ನೀಡಿರುವುದು ಸೇರಿದಂತೆ ಸುಮಾರು 19 ಪ್ರಕರಣಗಳನ್ನು ದೂರಿನಲ್ಲಿ ತಿಳಿಸಿರುವ ರಾಘವೇಂದ್ರ ಶೆಟ್ಟಿ, ಸುಮಾರು 6 ಕೋಟಿ ರೂ.ಗಳಷ್ಟು ಭ್ರಷ್ಟಾಚಾರ ನಡೆದಿರಬಹುದು. ಈ ಬಗ್ಗೆ ಕಡತ ಕೇಳಿದರೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ರೆ. ಈ ಕೂಡಲೇ ಸಂಬಂಧಿಸಿದ ಕಡತಗಳನ್ನು ಮುಟ್ಟುಗೋಲು ಹಾಕಿಕೊಂಡು ನಿರ್ದೇಶಕರ ವಿರುದ್ಧ ಸೂಕ್ತ ತನಿಖೆಗೆ ಆದೇಶಿಸಬೇಕೆಂದು ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದಾರೆ.