Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

bhirappa

ಬೆಂಗಳೂರು: ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಲ್‌.ಭೈರಪ್ಪ ನಿಧನರಾಗಿದ್ದು, ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿಕ ಅವರ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪಪ್‌ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ಕರೆತರಲಾಗುತ್ತದೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಇದನ್ನು ಓದಿ : ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರ ಆದೇಶ ನೀಡಿದೆ. ಸದ್ಯ ಲಂಡನ್‌ನಿಂದ ಅವರ ಹಿರಿಯ ಪುತ್ರ ರವಿಶಂಕರ್‌ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಭೈರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದರು. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ನೀಡಿ ಗೌರವಿಸಿದೆ.

Tags:
error: Content is protected !!