bhirappa
ಬೆಂಗಳೂರು: ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದು, ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿಕ ಅವರ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪಪ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ಕರೆತರಲಾಗುತ್ತದೆ.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಇದನ್ನು ಓದಿ : ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ ಅಂತ್ಯಕ್ರಿಯೆ
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರ ಆದೇಶ ನೀಡಿದೆ. ಸದ್ಯ ಲಂಡನ್‌ನಿಂದ ಅವರ ಹಿರಿಯ ಪುತ್ರ ರವಿಶಂಕರ್ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಭೈರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದರು. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ನೀಡಿ ಗೌರವಿಸಿದೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…