ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಂದು ವಿಧಿವಶರಾಗಿದ್ದು, ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ಗಣಿಗ ರವಿ ಅವರು, ಸಾವಿರ ಕೆಜಿ ಶ್ರೀಗಂಧದಿಂದ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಎಸ್.ಎಂ.ಕೃಷ್ಣ ಅವರು ಸಿಎಂ ಆಗಿದ್ದಾಗ ಶ್ರೀಗಂಧದ ಮರಗಳನ್ನು ರೈತರು ಬೆಳೆಯಲು ಅವಕಾಶ ಮಾಡಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದರ ಗೌರವಾರ್ಥವಾಗಿ ಶ್ರೀಗಂಧದಿಂದ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಕ್ಕರೆ ನಾಡು ಮಂಡ್ಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೆರಿಗೆ ಆಸ್ಪತ್ರೆಗೆ ಎಸ್.ಎಂ.ಕೃಷ್ಣ ಅವರ ಹೆಸರಿಡಲಾಗುವುದು. ಮಂಡ್ಯದಲ್ಲಿನ ಒಂದು ಉದ್ಯಾನವನಕ್ಕೂ ಎಸ್.ಎಂ.ಕೃಷ್ಣ ಹೆಸರಿಡಲಾಗುವುದು ಎಂದು ತಿಳಿಸಿದರು.





