ರಾಜ್ಯ

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ನಿಧನ: ನಾಳೆ ಸರ್ಕಾರಿ ರಜೆ ಘೋಷಣೆ, ಮೂರು ದಿನ ಶೋಕಾಚರಣೆ

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಆಚರಿಸಲಾಗುತ್ತಿದ್ದು, ನಾಳೆ(ಡಿ.11) ಅಧಿಕೃತವಾಗಿ ಸರ್ಕಾರಿ ರಜೆಯನ್ನು ಘೋಷಿಸಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಎಸ್‌.ಎಂ.ಕೃಷ್ಣ(93) ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಡಿ.10) ಬೆಳಿಗ್ಗೆ ಸುಮಾರು 2.30 ಗಂಟೆಗೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬುಧವಾರ(ಡಿ.11) ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿ, ಸದಾಶಿವನಗರದಲ್ಲಿರುವ ಮಾಜಿ ಮುಖ್ಯಮಂತ್ರಿ  ಎಸ್‌.ಎಂ.ಕೃಷ್ಣರವರ ನಿವಾಸದಲ್ಲಿ ಬುಧವಾರ(ಡಿ.11) ಬೆಳಿಗ್ಗೆ 8 ಗಂಟೆಯವರೆಗೆ ಮೃತರ ಅಂತಿಮ ದರ್ಶನ ನಡೆಯಲಿದೆ. ಬಳಿಕ ಬೆಳಿಗ್ಗೆ 10.30 ಗಂಟೆಯಿಂದ ಮದ್ದೂರಿನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

52 seconds ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

53 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago