ಬೆಂಗಳೂರು: ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ.
ಬೆಂಗಳೂರಿನ ಸದಾಶಿವನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ 5ನೇ ಅಡ್ಡರಸ್ತೆಯಲ್ಲಿರುವ ಶಾಂಭವಿ ನಿವಾಸದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಪತ್ನಿ ಪ್ರೇಮಾ ಕೃಷ್ಣ, ಡಿಸಿಎಂ ಡಿ.ಕೆ.ಶಿವಕುಮಾರ್, ಅವರ ಪುತ್ರಿಯರು ಹಾಗೂ ಮೊಮ್ಮಕ್ಕಳು ಪೂಜೆಸಲ್ಲಿದ್ದಾರೆ.
ಬಳಿಕ ಹೂವಿನಿಂದ ಅಲಂಕೃತವಾಗಿರುವ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿದೆ.
ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವೂ ಬೆಂಗಳೂರಿನ ಟೌನ್‌ಹಾಲ್, ಮೈಸೂರು ಸರ್ಕಲ್, ರಾಜರಾಜೇಶ್ವರಿ ಆರ್ಚ್ ಮೂಲಕ, ಕೆಂಗೇರಿ, ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣದ ಮೂಲಕ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯವರೆಗೆ ತಲುಪಲಿದೆ. ನಂತರ ಮೃತರ ಸ್ವಗ್ರಾಮದಲ್ಲಿ ಸಾರ್ವಜನಿಕರಿಗೆ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೃತರ ಸ್ವಗ್ರಾಮವಾಗಿರುವ ಸೋಮನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರು ಒಕ್ಕಲಿಗ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ಜನಪರ ಆಡಳಿತ ನೀಡಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆಡಳಿತದ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಅವರ ಜನಪರ ಅಭಿವೃದ್ಧಿಗಾಗಿ ಕೈಗೊಂಡಂತಹ ಕಾರ್ಯಕ್ರಮಗಳು ಆದರ್ಶಯುತವಾಗಿವೆ. ಕೃಷ್ಣ ಅವರು ತಂತ್ರಜ್ಞಾನ ನೀತಿಗೆ ಭದ್ರ ಬುನಾದಿ ಹಾಕಿ ನಮ್ಮ ದೇಶದ ಆರ್ಥಿಕತೆ ಅತಿ ವೇಗವಾಗಿ ಮುಂದುವರೆಯಲು ಕಾರಣರಾದರು ಎಣದು ಹೇಳಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…