ರಾಜ್ಯ

ಹುಟ್ಟೂರಿನತ್ತ ತೆರಳಿದ ಎಸ್‌.ಎಂ.ಕೃಷ್ಣ ಅಂತಿಮ ಯಾತ್ರೆ

ಬೆಂಗಳೂರು:  ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ.

ಬೆಂಗಳೂರಿನ ಸದಾಶಿವನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ 5ನೇ ಅಡ್ಡರಸ್ತೆಯಲ್ಲಿರುವ ಶಾಂಭವಿ ನಿವಾಸದಲ್ಲಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಪತ್ನಿ ಪ್ರೇಮಾ ಕೃಷ್ಣ, ಡಿಸಿಎಂ ಡಿ.ಕೆ.ಶಿವಕುಮಾರ್‌, ಅವರ ಪುತ್ರಿಯರು ಹಾಗೂ ಮೊಮ್ಮಕ್ಕಳು ಪೂಜೆಸಲ್ಲಿದ್ದಾರೆ.
ಬಳಿಕ ಹೂವಿನಿಂದ ಅಲಂಕೃತವಾಗಿರುವ ಗಾಜಿನ ವಾಹನದಲ್ಲಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿದೆ.

ಎಸ್‌.ಎಂ. ಕೃಷ್ಣ ಅವರ ಪಾರ್ಥಿವ ಶರೀರವೂ ಬೆಂಗಳೂರಿನ ಟೌನ್‌ಹಾಲ್‌, ಮೈಸೂರು ಸರ್ಕಲ್‌, ರಾಜರಾಜೇಶ್ವರಿ ಆರ್ಚ್‌ ಮೂಲಕ, ಕೆಂಗೇರಿ, ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣದ ಮೂಲಕ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯವರೆಗೆ ತಲುಪಲಿದೆ. ನಂತರ ಮೃತರ ಸ್ವಗ್ರಾಮದಲ್ಲಿ ಸಾರ್ವಜನಿಕರಿಗೆ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೃತರ ಸ್ವಗ್ರಾಮವಾಗಿರುವ ಸೋಮನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್‌ ಶರ್ಮ ಅವರು ಒಕ್ಕಲಿಗ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ಜನಪರ ಆಡಳಿತ ನೀಡಿದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಆಡಳಿತದ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಅವರ ಜನಪರ ಅಭಿವೃದ್ಧಿಗಾಗಿ ಕೈಗೊಂಡಂತಹ ಕಾರ್ಯಕ್ರಮಗಳು ಆದರ್ಶಯುತವಾಗಿವೆ. ಕೃಷ್ಣ ಅವರು ತಂತ್ರಜ್ಞಾನ ನೀತಿಗೆ ಭದ್ರ ಬುನಾದಿ ಹಾಕಿ ನಮ್ಮ ದೇಶದ ಆರ್ಥಿಕತೆ ಅತಿ ವೇಗವಾಗಿ ಮುಂದುವರೆಯಲು ಕಾರಣರಾದರು ಎಣದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

8 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago