Mysore
23
few clouds

Social Media

ಸೋಮವಾರ, 26 ಜನವರಿ 2026
Light
Dark

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಇದನ್ನು ಓದಿ:  ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಬೇರೆ ಪಕ್ಷ ರಚಿಸಿದ್ದರು. ಭ್ರಷ್ಟಾಚಾರದ ವಿರುದ್ಧವಾಗಿದ್ದ ರಾಜಕಾರಣಿಯಾಗಿದ್ದರು ಎಂದರು.

ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕ ಕರ್ನಾಟಕದ ಏಕೀಕರಣಕ್ಕೂ ಅವರು ದುಡಿದಿದವರು. ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಹುಟ್ಟುಹಬ್ಬದಂದು ಸರ್ಕಾರ ಅವರನ್ನು ಸ್ಮರಿಸಿ ಗೌರವಿಸುತ್ತದೆ ಎಂದರು.

Tags:
error: Content is protected !!